ರಾಜ್ಯದಲ್ಲಿಂದು ಹೊಸದಾಗಿ 279 ಜನರಿಗೆ ಕೋವಿಡ್ ಪಾಸಿಟಿವ್, ಮೂವರು ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 279 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು ಮೂವರು ಸೋಂಕಿತರು ಸಾವನ್ನಪ್ಪಿದ್ದಾರೆ.

ಬೆಂಗಳೂರಿನಲ್ಲಿ ಒಬ್ಬರು, ಮೈಸೂರು ಜಿಲ್ಲೆಯಲ್ಲಿ ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಇಂದು 134 ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 6359 ಜನರ ಕೋವಿಡ್ ಪರೀಕ್ಷೆ ಮಾಡಲಾಗಿದೆ. 279 ಜನರಿಗೆ ಸೋಂಕು ತಗುಲಿದೆ.

ರಾಜ್ಯದಲ್ಲಿಂದು 235 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, 1222 ಸಕ್ರಿಯ ಪ್ರಕರಣಗಳು ಇವೆ. ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ದರ ಶೇಕಡ 4.38ರಷ್ಟು ಇದೆ.

ಮೈಸೂರು 23, ಹಾಸನ 13, ಬಳ್ಳಾರಿ 11, ಚಿಕ್ಕಮಗಳೂರುಮ ರಾಯಚೂರುಮ ವಿಜಯನಗರ ತಲಾ 8, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಲಾ 7 ಕೇಸ್ ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read