HomeKarnatakaBIG NEWS: ದೇಶದ ಹಲವೆಡೆ ಕೊರೋನಾ ಮತ್ತೆ ಉಲ್ಬಣ ಹಿನ್ನಲೆ ಆರೋಗ್ಯ ಇಲಾಖೆಯಿಂದ ಸಾಲು ಸಾಲು...

BIG NEWS: ದೇಶದ ಹಲವೆಡೆ ಕೊರೋನಾ ಮತ್ತೆ ಉಲ್ಬಣ ಹಿನ್ನಲೆ ಆರೋಗ್ಯ ಇಲಾಖೆಯಿಂದ ಸಾಲು ಸಾಲು ಸಭೆ ನಿಗದಿ

ಬೆಂಗಳೂರು: ದೇಶದಲ್ಲಿ ಕೊರೋನಾ ಸೋಂಕು ತೀವ್ರ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನಿಯಂತ್ರಣ ಸಂಬಂಧ ಸಾಲು ಸಾಲು ಸಭೆ ನಿಗದಿಯಾಗಿವೆ,

ನಾಳೆ ಬೆಳಗ್ಗೆ 10 ಗಂಟೆಗೆ ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕೇಂದ್ರ ಆರೋಗ್ಯ ಸಚಿವರು ಸಭೆ ನಡೆಸಲಿದ್ದಾರೆ ಎಂದು ವಿಕಾಸಸೌಧದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾಳೆ ಕೇಂದ್ರ ಆರೋಗ್ಯ ಇಲಾಖೆಯಿಂದ ಸಭೆ ನಡೆಸಲಾಗುವುದು. ಗುರುವಾರ ಮಧ್ಯಾಹ್ನ 3 ಗಂಟೆಗೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಇಲಾಖೆಯ ಅಧಿಕಾರಿಗಳು, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಚರ್ಚೆ ನಡೆಸಲಿದ್ದಾರೆ.

ಈಗಾಗಲೇ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ಏನೆಲ್ಲ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕೆಂಬ ಬಗ್ಗೆ ಸಿಎಂ ಸಭೆ ನಡೆಸಲಿದ್ದಾರೆ. ಶುಕ್ರವಾರ ರಾಜ್ಯ ಆರೋಗ್ಯ ಇಲಾಖೆಯಿಂದ ಸಭೆ ನಿಗದಿಯಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular