BREAKING : ಜನವರಿ ಮೊದಲ ವಾರ ಕರ್ನಾಟಕದಲ್ಲಿ ‘ಕೊರೊನಾ ಸ್ಪೋಟ’ ಸಾಧ್ಯತೆ : IISC, TAC ತಜ್ಞರಿಂದ ಶಾಕಿಂಗ್ ಮಾಹಿತಿ

ಬೆಂಗಳೂರು : ಜನವರಿ ಮೊದಲ ವಾರದಲ್ಲಿ ಕರ್ನಾಟಕದಲ್ಲಿ ಕೊರೊನಾ ಸ್ಪೋಟವಾಗಲಿದೆ ಎಂದು ಐಐಎಸ್ಸಿ (IISC) ಹಾಗೂ ಟಿಎಸಿ  (TAC) ತಜ್ಞರು ಶಾಕಿಂಗ್ ಮಾಹಿತಿ ಬಿಚ್ಚಿಟ್ಟಿದ್ದಾರೆ.

ಜನವರಿ ಮೊದಲ ವಾರದಲ್ಲಿ ಕರ್ನಾಟಕದಲ್ಲಿ ಕೊರೊನಾ ಸ್ಪೋಟವಾಗಲಿದೆ , ಜನವರಿ ಮೊದಲ ವಾರ ಏರಿಕೆಯಾಗಿ ಫೆಬ್ರವರಿಯಲ್ಲಿ ಇಳಿಕೆಯಾಗುವ ಸಾಧ್ಯತೆಯಿದೆ  ಎಂದು ಎಚ್ಚರಿಕೆ ನೀಡಿದ್ದಾರೆ.  ಈ ಹಿನ್ನೆಲೆ ಬೆಂಗಳೂರಿನಲ್ಲಿ ಪ್ರತಿದಿನ 2500 ಕೋವಿಡ್ ಟೆಸ್ಟ್ ಗಳನ್ನು ಮಾಡಲು ನಿರ್ಧರಿಸಲಾಗಿದೆ.

ಕೊರೊನಾ ಸಂಬಂಧ ಇಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಜೊತೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಲಿದ್ದು, ಕೊರೊನಾ ಹೊಸ ಮಾರ್ಗಸೂಚಿ ಬಿಡುಗಡೆಯಾಗುವ ಸಾಧ್ಯತೆಯಿದೆ. ಅಲ್ಲದೇ ಶಾಲಾ ಕಾಲೇಜುಗಳಲ್ಲಿ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಕೂಡ ಚರ್ಚೆ ನಡೆಯುವ ಸಾಧ್ಯತೆಯಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read