
ಜನವರಿ ಮೊದಲ ವಾರದಲ್ಲಿ ಕರ್ನಾಟಕದಲ್ಲಿ ಕೊರೊನಾ ಸ್ಪೋಟವಾಗಲಿದೆ , ಜನವರಿ ಮೊದಲ ವಾರ ಏರಿಕೆಯಾಗಿ ಫೆಬ್ರವರಿಯಲ್ಲಿ ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆ ಬೆಂಗಳೂರಿನಲ್ಲಿ ಪ್ರತಿದಿನ 2500 ಕೋವಿಡ್ ಟೆಸ್ಟ್ ಗಳನ್ನು ಮಾಡಲು ನಿರ್ಧರಿಸಲಾಗಿದೆ.
ಕೊರೊನಾ ಸಂಬಂಧ ಇಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಜೊತೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಲಿದ್ದು, ಕೊರೊನಾ ಹೊಸ ಮಾರ್ಗಸೂಚಿ ಬಿಡುಗಡೆಯಾಗುವ ಸಾಧ್ಯತೆಯಿದೆ. ಅಲ್ಲದೇ ಶಾಲಾ ಕಾಲೇಜುಗಳಲ್ಲಿ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಕೂಡ ಚರ್ಚೆ ನಡೆಯುವ ಸಾಧ್ಯತೆಯಿದೆ.

