HomeLatest NewsBREAKING : ಬೆಂಗಳೂರಲ್ಲಿ ಮಹಾಮಾರಿ 'ಕೊರೊನಾ' ಸ್ಪೋಟ : ಇದುವರೆಗೆ 70 ಮಂದಿಗೆ ಸೋಂಕು ಧೃಡ...

BREAKING : ಬೆಂಗಳೂರಲ್ಲಿ ಮಹಾಮಾರಿ ‘ಕೊರೊನಾ’ ಸ್ಪೋಟ : ಇದುವರೆಗೆ 70 ಮಂದಿಗೆ ಸೋಂಕು ಧೃಡ |Covid-19

ಬೆಂಗಳೂರು : ಬೆಂಗಳೂರಿನಲ್ಲಿ ಮಹಾಮಾರಿ ಕೊರೊನಾ ಸ್ಪೋಟಗೊಂಡಿದ್ದು, ಇದುವರೆಗೆ 70 ಮಂದಿಗೆ ಸೋಂಕು ಧೃಡವಾಗಿದೆ.

ಹೌದು, ಬೆಂಗಳೂರಿನ ಮಹದೇವಪುರ ವಲಯ ಕೊರೊನಾ ಹಾಟ್ ಸ್ಪಾಟ್ ಆಗಿದೆ. ಅಲ್ಲಿಯೇ ಅತಿ ಹೆಚ್ಚು ಕೇಸ್ ದಾಖಲಾಗಿದೆ.

ಬೊಮ್ಮನಹಳ್ಳಿಯಲ್ಲಿ 7, ಬೆಂಗಳೂರು ಕೇಂದ್ರ 5, ಯಲಹಂಕ 4, ದಾಸರಹಳ್ಳಿಯಲ್ಲಿ 1, ಮಾದೇವಪುರ 16, ಬೆಂಗಳೂರು ದಕ್ಷಿಣ 14, ಬೆಂಗಳೂರು ಪೂರ್ವ 13, ಬೆಂಗಳೂರು ಪಶ್ಚಿಮ 10 ಪ್ರಕರಣಗಳು ಬೆಳಕಿಗೆ ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದ ಜನರು ಆತಂಕ ಪಡುವ ಅಗತ್ಯವಿಲ್ಲ : ದಿನೇಶ್ ಗುಂಡೂರಾವ್

ಕಳೆದ ಒಂದು ವಾರದಲ್ಲಿ ವಿಶೇಷವಾಗಿ ಬೆಂಗಳೂರಿನಲ್ಲಿ ಕೋವಿಡ್ ಪಾಸಿಟಿವ್ ಸೋಂಕಿತರಲ್ಲಿ ಕೊಂಚ ಏರಿಕೆಯಾಗಿದೆ. ಮುಂಜಾಗ್ರತ ಕ್ರಮಗಳನ್ನ ಸರ್ಕಾರ ತೆಗೆದುಕೊಳ್ಳುತ್ತಿದೆ. ರಾಜ್ಯದ ಜನರು ಆತಂಕ ಪಡುವ ಅಗತ್ಯವಿಲ್ಲ.ಉಸಿರಾಟದ ಸಮಸ್ಯೆ, ಹೃದಯ ಸಂಬಂಧಿ ಕಾಯಿಲೆಯಿಂದ ಆಸ್ಪತ್ರೆಗಳಲ್ಲಿ ಅಡ್ಮಿಟ್ ಆದವರನ್ನ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಗೆ ಒಳಪಡಿಸಲು ಸೂಚಿಸಲಾಗಿದೆ. ಅಗತ್ಯ ಟೆಸ್ಟಿಂಗ್ ಕಿಟ್ ಗಳನ್ನ ತೆಗೆದಿರಿಸಿಕೊಳ್ಳಲು ಅಧಿಕಾರಿಗಳಿಗೆ ನಾನು ಸೂಚಿನೆ ನೀಡಿದ್ದೇನೆ. ಒಂದು ತಿಂಗಳಿಗೆ ಬೇಕಾಗುವ 5 ಸಾವಿರ RTPCR ಹಾಗೂ 5 ಸಾವಿರ VDRL ಟೆಸ್ಟಿಂಗ್ ಕಿಟ್ ಗಳ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಬಾಣಂತಿಯರು, ಗರ್ಭೀಣಿಯರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಉತ್ತಮ. ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಹೊಂದಿದ 35 ಜನರಲ್ಲಿ ಕೋವಿಡ್ ಗಂಭೀರವಾಗಿಲ್ಲ. ಸೌಮ್ಯ ಸ್ವಭಾವದ ಲಕ್ಷಣಗಳು ಕಂಡುಬಂದಿವೆ. ಹೀಗಾಗಿ ಸಾರ್ವಜನಿಕರು ಕೋವಿಡ್ ಬಂತು ಎಂದು ಆತಂಕಗೊಳ್ಳದೇ ತಮ್ಮ ಸಹಜ ಜೀವನ ನಡೆಸಬಹುದು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular