HomeKarnatakaಕೇರಳದಲ್ಲಿ ಕೋವಿಡ್ ಹೆಚ್ಚಳ ಬೆನ್ನಲ್ಲೇ ರಾಜ್ಯದಲ್ಲಿ ಕಟ್ಟೆಚ್ಚರ: ತುರ್ತು ಸಭೆ ನಡೆಸಿದ ಆರೋಗ್ಯ ಸಚಿವ ದಿನೇಶ್...

ಕೇರಳದಲ್ಲಿ ಕೋವಿಡ್ ಹೆಚ್ಚಳ ಬೆನ್ನಲ್ಲೇ ರಾಜ್ಯದಲ್ಲಿ ಕಟ್ಟೆಚ್ಚರ: ತುರ್ತು ಸಭೆ ನಡೆಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಕೇರಳದಲ್ಲಿ ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆಯಿಂದ ತುರ್ತು ಸಭೆ ನಡೆಸಲಾಗಿದೆ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿದ್ದು, ಸಭೆಯ ಬಳಿಕ ಮಾಹಿತಿ ನೀಡಿದ ಸಚಿವರು, ಕಳೆದ ಒಂದು ತಿಂಗಳಿಂದ ಸಾಂಕ್ರಾಮಿಕ ಕಾಯಿಲೆಗಳು ಹೆಚ್ಚಾಗುತ್ತಿವೆ. ವೈರಲ್ ಫೀವರ್, ಐಎಲ್ಐ ಸಾರಿ ಪ್ರಕರಣಗಳು ಕಂಡು ಬಂದರೆ ಪರೀಕ್ಷೆ ಮಾಡಲಾಗುವುದು. ಕೋವಿಡ್ ಲಕ್ಷಣ, ಪ್ರಕರಣ ಕಂಡು ಬಂದರೆ ಪರೀಕ್ಷೆಯನ್ನು ಇನ್ನಷ್ಟು ಹೆಚ್ಚಿಸಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಸ್ತುತ ಮೂರು ತಿಂಗಳಿಗೆ ಅಗತ್ಯವಿರುವಷ್ಟು ಕೋವಿಡ್ ಟೆಸ್ಟ್ ಕಿಟ್ ಖರೀದಿಗೆ ಸೂಚನೆ ನೀಡಲಾಗಿದೆ. ಒಂದು ತಿಂಗಳ ಟೆಸ್ಟ್ ಮಾಡಲು 3 ಲಕ್ಷ ಆರ್.ಟಿ.ಪಿ.ಸಿ.ಆರ್. ಟೆಸ್ಟಿಂಗ್ ಕಿಟ್ ಅಗತ್ಯವಿದೆ. ಔಷಧ ಬೆಡ್ ವ್ಯವಸ್ಥೆ ಪರಿಶೀಲಿಸಲು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾಕ್ ಡ್ರಿಲ್ ಗೆ ಸೂಚನೆ ನೀಡಲಾಗಿದೆ. ಡಿಸೆಂಬರ್ 19ರಂದು ತಾಂತ್ರಿಕ ಸಲಹಾ ಸಮಿತಿಯ ಅಧ್ಯಕ್ಷ ಡಾ. ರವಿ ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular