ರಾಜ್ಯದಲ್ಲಿಂದು ಕೊರೋನಾ ಆರ್ಭಟ: ತ್ರಿಶತಕ ದಾಟಿದ ಹೊಸ ಕೇಸ್: 329 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು 329 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ 177 ಜನರಿಗೆ ಕೊರೋನಾ ಸೋಂಕು ತಗುಲಿದೆ. ಗದಗದಲ್ಲಿ 48 ವರ್ಷದ ವ್ಯಕ್ತಿ ಕೊರೋನಾದಿಂದ ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ 8.61 ರಷ್ಟು ಇದೆ. ಕಳೆದ 24 ಗಂಟೆಗಳಲ್ಲಿ 3819 ಕೋವಿಡ್ ಪರೀಕ್ಷೆ ನಡೆಸಲಾಗಿದೆ. 1181 ಜನರಲ್ಲಿ ಸೋಂಕು ಸಕ್ರಿಯವಾಗಿದೆ. 283 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಬೆಂಗಳೂರು 177, ಮೈಸೂರು 27, ಹಾಸನ 17, ತುಮಕೂರು 16, ಬಾಗಲಕೋಟೆ, ಮಂಡ್ಯ ತಲಾ 10, ಬೆಂಗಳೂರು ಗ್ರಾಮಾಂತರ 8, ಚಿಕ್ಕಮಗಳೂರು, ಚಿತ್ರದುರ್ಗ, ಧಾರವಾಡ ತಲಾ 7, ಉತ್ತರ ಕನ್ನಡ 6, ಚಾಮರಾಜನಗರ ರಾಯಚೂರು ತಲಾ 5, ಚಿಕ್ಕಬಳ್ಳಾಪುರ, ಕೋಲಾರ, ಕೊಪ್ಪಳ ತಲಾ 4, ಬಳ್ಳಾರಿ, ಶಿವಮೊಗ್ಗ, ವಿಜಯನಗರ ಜಿಲ್ಲೆಯಲ್ಲಿ ತಲಾ 3, ದಾವಣಗೆರೆ 2, ದಕ್ಷಿಣ ಕನ್ನಡ, ಗದಗ, ಕಲಬುರಗಿ ತಲಾ ಒಂದು ಕೇಸ್ ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read