ಬೆಂಗಳೂರಲ್ಲಿ 124 ಜನ ಸೇರಿ ರಾಜ್ಯದಲ್ಲಿಂದು 240 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 240 ಜನರಿಗೆ ಕೊರೋನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ ಕೊರೋನಾ ಸೋಂಕಿಗೆ ಒಬ್ಬರು ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ 124 ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ.

ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ 3.42ರಷ್ಟು ಇದೆ. ಕಳೆದ 24 ಗಂಟೆಯಲ್ಲಿ 7015 ಜನರಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದೆ. 993 ಜನರಲ್ಲಿ ಸೋಂಕು ಸಕ್ರಿಯವಾಗಿದ್ದು, 220 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಬಾಗಲಕೋಟೆ 1, ಬಳ್ಳಾರಿ 3, ಬೆಳಗಾವಿ 1, ಬೆಂಗಳೂರು ಗ್ರಾಮಾಂತರ 6, ಬೆಂಗಳೂರು ನಗರ 124, ಚಾಮರಾಜನಗರ 4, ಚಿಕ್ಕಬಳ್ಳಾಪುರ 5, ಚಿಕ್ಕಮಗಳೂರು, ಚಿತ್ರದುರ್ಗ ತಲಾ 6, ದಕ್ಷಿಣ ಕನ್ನಡ, ದಾವಣಗೆರೆ ತಲಾ 2 ಕೇಸ್ ಪತ್ತೆಯಾಗಿವೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read