ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಆರೋಗ್ಯ ಇಲಾಖೆ ಮಾರ್ಗ ಸೂಚಿ ಬಿಡುಗಡೆ ಮಾಡಿದೆ. ಇದರ ಬೆನ್ನಲ್ಲೇ ನಾಳೆಯಿಂದ ರಾಜ್ಯದ 8 ಮೆಡಿಕಲ್ ಕಾಲೇಜುಗಳಲ್ಲಿ ಕೋವಿಡ್ ಟೆಸ್ಟ್ ಆರಂಭವಾಗಲಿದೆ.
ರಾಜ್ಯದಲ್ಲಿ ಈಗಾಗಲೇ 35 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ನಾಳೆಯಿಂದಲೇ ರಾಜ್ಯದಲ್ಲಿ ಕೋವಿಡ್ ಟೆಸ್ಟ್ ಪ್ರಾರಂಭಿಸುವ ಅಗತ್ಯವಿದೆ ಎಂದು ಕೋವಿಡ್ ಸಲಹಾ ಸಮಿತಿ ಆರೋಗ್ಯ ಸಚಿವರಿಗೆ ಸಲಹೆ ನೀಡಿದೆ. ಈ ನಿಟ್ಟಿನಲ್ಲಿ ನಾಳೆಯಿಂದಲೇ ಕೋವಿಡ್ ಟೆಸ್ಟ್ ಆರಂಭವಾಗಲಿದೆ.
ಕೋಮಾರ್ಬಿಟಿಸ್, ಸಾರಿ, ಐಎಲ್ ಐ ರೋಗಲಕ್ಷಣಗಳಿರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯವಾಗಿದೆ. ಜ್ವರ, ಕೆಮ್ಮು, ನೆಗಡಿಯಂತಹ ಲಕ್ಷಣಗಳಿರುವವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಉಸಿರಾಟದ ತೊಂದರೆ, SARI ಪ್ರಕರಣಗಳಲ್ಲಿ ಕೋವಿಡ್ ಟೆಸ್ಟ್ ಕಡ್ಡಾಯವಾಗಿದೆ ಎಂದು ತಿಳಿಸಿದೆ.