HomeKarnatakaರಾಜ್ಯದಲ್ಲಿ 672 ಜನರಲ್ಲಿ ಕೊರೋನಾ ಸಕ್ರಿಯ: 165 ಸೋಂಕಿತರು ಗುಣಮುಖ

ರಾಜ್ಯದಲ್ಲಿ 672 ಜನರಲ್ಲಿ ಕೊರೋನಾ ಸಕ್ರಿಯ: 165 ಸೋಂಕಿತರು ಗುಣಮುಖ

ಬೆಂಗಳೂರು: ರಾಜ್ಯದಲ್ಲಿ ಇಂದು 87 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ರಾಜಧಾನಿ ಬೆಂಗಳೂರಿನಲ್ಲಿ 38 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಮೈಸೂರು ಜಿಲ್ಲೆಯಲ್ಲಿ ಇಂದು ಕೊರೋನಾ ಸೋಂಕಿತರೊಬ್ಬರು ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ 1.14 ರಷ್ಟು ಇದೆ. 24 ಗಂಟೆಯಲ್ಲಿ 7579 ಕೋವಿಡ್ ಪರೀಕ್ಷೆ ನಡೆಸಲಾಗಿದೆ. 672 ಜನರಲ್ಲಿ ಕೊರೋನಾ ಸೋಂಕು ಸಕ್ರಿಯವಾಗಿದೆ. 165 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಧಾರವಾಡ 9, ಚಿಕ್ಕಮಗಳೂರು 8, ಶಿವಮೊಗ್ಗ ಗ್ರಾಮಾಂತರ 6, ಹಾಸನ 5 ಕೇಸ್ ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular