ಬೆಂಗಳೂರು: ಜಿಲ್ಲೆಗಳಲ್ಲಿಯೂ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸೋಂಕು ತಡೆಗೆ ಕಂಪ್ಲೀಟ್ ಲಾಕ್ ಡೌನ್ ಜಾರಿ ಮಾಡಲಾಗಿದೆ.
ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಲಾಕ್ಡೌನ್ ಜೊತೆಗೆ ಕಠಿಣ ನಿರ್ಬಂಧ ಜಾರಿಗೊಳಿಸಲಾಗಿದೆ. ಕಲಬುರ್ಗಿ ಜಿಲ್ಲೆಯಲ್ಲಿ ಇಂದಿನಿಂದಲೇ ಮೇ 22 ರವರೆಗೆ ಕಂಪ್ಲೀಟ್ ಲಾಕ್ಡೌನ್ ಜಾರಿ ಮಾಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮೇ 23ರವರೆಗೆ ಕಂಪ್ಲೀಟ್ ಲಾಕ್ ಡೌನ್ ಜಾರಿಯಲ್ಲಿದೆ.
ಅದೇ ರೀತಿ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೇ 20 ರಿಂದ 24 ರವರೆಗೆ ಸಂಪೂರ್ಣ ಲಾಕ್ ಡೌನ್ ಮಾಡಲಾಗುವುದು. ರಾಯಚೂರು ಜಿಲ್ಲೆಯಲ್ಲಿ ವಾರದಲ್ಲಿ ಮೂರು ದಿನಗಳ ಕಾಲ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ ಮೇ 17 ರಿಂದಲೇ 5 ದಿನ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿದೆ. ಅದೇ ರೀತಿ ಹಾಸನ, ಬೆಳಗಾವಿ, ಹಾವೇರಿ ಹಾಗೂ ಅನೇಕ ಜಿಲ್ಲೆಗಳಲ್ಲಿ ಕಂಪ್ಲೀಟ್ ಲಾಕ್ ಡೌನ್ ಜಾರಿ ಮಾಡಲಾಗಿದೆ.