ಬೆಂಗಳೂರು: ನಾಲ್ಕು ನಿಗಮ ಮಂಡಳಿಗಳಿಗೆ ಪದಾಧಿಕಾರಿಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಒಕ್ಕಲಿಗ ಸಮುದಾಯದ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಮಂಡ್ಯದ ಎಂ.ಎಸ್.ಆತ್ಮಾನಂದ, ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಸುಜ್ಞಾನಮೂರ್ತಿ ಅವರನ್ನು ನೇಮಕ ಮಾಡಲಾಗಿದೆ.
ಆರ್ಯ ವೈಶ್ಯ ಸಮುದಾಯದ ಅಭಿವೃದ್ಧಿ ನಿಗದ ಅಧ್ಯಕ್ಷರನ್ನಾಗಿ ಕೆ.ವಿ.ರಾಮಪ್ರಸಾದ್ ಹಾಗೂ ಕರ್ನಾಟಕ ರಾಜ್ಯ ಜವಳಿ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾಗಿ ಜಿ.ವಿ.ಬಾಲಾಜಿ ಅವರನ್ನು ನೇಮಕ ಮಾಡಲಾಗಿದೆ.