BIG NEWS: ಕಿಯೊನಿಕ್ಸ್ ಸೇರಿ ವಿವಿಧ ನಿಗಮಗಳ ಖಾಲಿ ಹುದ್ದೆ ಭರ್ತಿ: ಪರಿಷ್ಕೃತ ಅಂಕಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ(ಕಿಯೊನಿಕ್ಸ್‌) ಸೇರಿದಂತೆ ವಿವಿಧ ನಿಗಮಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ನಡೆಸಿದ್ದ ಲಿಖಿತ ಪರೀಕ್ಷೆಯ ಪರಿಷ್ಕೃತ ಅಂಕಗಳ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.

ಆರು ನಿಗಮ ಮಂಡಳಿಗಳ ವಿವಿಧ ವೃಂದದ ಹುದ್ದೆಗಳ ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿ 6,18,148 ಅಭ್ಯರ್ಥಿಗಳು ಪಡೆದ ಅಂಕಗಳ ಹುದ್ದೆವಾರು ಪರಿಷ್ಕೃತ ಅಂಕಗಳನ್ನು ಪಟ್ಟಿ ಒಳಗೊಂಡಿದೆ. ಪರಿಷ್ಕೃತ ಅಂಕಪಟ್ಟಿಗೆ ಆಕ್ಷೇಪಣೆಗಳನ್ನು ಜೂನ್‌ 14ರ ಒಳಗೆ ಇ-ಮೇಲ್‌ kea2023exam@gmail.com ಸಲ್ಲಿಸಬಹುದಾಗಿದೆ.

ಕರ್ನಾಟಕ ಆಹಾರ ಮತ್ತು ನಾಗಾರೀಕ ಸರಬರಾಜು ನಿಗಮ ನಿಯಮಿತ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ, ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಪರೀಕ್ಷೆಗಳಿಗೆ ಹಾಜರಾದ ಅಭ್ಯರ್ಥಿಗಳ ತಾತ್ಕಾಲಿಕ ಅಂಕಪಟ್ಟಿಯನ್ನು ಕೆಇಎ ವೆಬ್‌ಸೈಟ್‌ನಲ್ಲಿ ಪ್ರಕಟಿಸಿ, ಅಭ್ಯರ್ಥಿಗಳಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿರುತ್ತದೆ. ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಶೀಲಿಸಿ ಪರಿಷ್ಕೃತ ತಾತ್ಕಾಲಿಕ ಅಭ್ಯರ್ಥಿಗಳ ಅಂಕಪಟ್ಟಿಯನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ಸದರಿ ಪರಿಷ್ಕೃತ ತಾತ್ಕಾಲಿಕ ಅಂಕಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ kea2023exam@gmail.com ಗೆ ಇ-ಮೇಲ್ ಮೂಲಕ ಸಲ್ಲಿಸಬಹುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

https://www.facebook.com/photo/?fbid=3817108528507305&set=gm.1968513890247629&idorvanity=383606545405046

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read