HomeKarnatakaBIG NEWS: ಕಿಯೊನಿಕ್ಸ್ ಸೇರಿ ವಿವಿಧ ನಿಗಮಗಳ ಖಾಲಿ ಹುದ್ದೆ ಭರ್ತಿ: ಪರಿಷ್ಕೃತ ಅಂಕಪಟ್ಟಿ ಪ್ರಕಟ

BIG NEWS: ಕಿಯೊನಿಕ್ಸ್ ಸೇರಿ ವಿವಿಧ ನಿಗಮಗಳ ಖಾಲಿ ಹುದ್ದೆ ಭರ್ತಿ: ಪರಿಷ್ಕೃತ ಅಂಕಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ(ಕಿಯೊನಿಕ್ಸ್‌) ಸೇರಿದಂತೆ ವಿವಿಧ ನಿಗಮಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ನಡೆಸಿದ್ದ ಲಿಖಿತ ಪರೀಕ್ಷೆಯ ಪರಿಷ್ಕೃತ ಅಂಕಗಳ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.

ಆರು ನಿಗಮ ಮಂಡಳಿಗಳ ವಿವಿಧ ವೃಂದದ ಹುದ್ದೆಗಳ ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿ 6,18,148 ಅಭ್ಯರ್ಥಿಗಳು ಪಡೆದ ಅಂಕಗಳ ಹುದ್ದೆವಾರು ಪರಿಷ್ಕೃತ ಅಂಕಗಳನ್ನು ಪಟ್ಟಿ ಒಳಗೊಂಡಿದೆ. ಪರಿಷ್ಕೃತ ಅಂಕಪಟ್ಟಿಗೆ ಆಕ್ಷೇಪಣೆಗಳನ್ನು ಜೂನ್‌ 14ರ ಒಳಗೆ ಇ-ಮೇಲ್‌ [email protected] ಸಲ್ಲಿಸಬಹುದಾಗಿದೆ.

ಕರ್ನಾಟಕ ಆಹಾರ ಮತ್ತು ನಾಗಾರೀಕ ಸರಬರಾಜು ನಿಗಮ ನಿಯಮಿತ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ, ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಪರೀಕ್ಷೆಗಳಿಗೆ ಹಾಜರಾದ ಅಭ್ಯರ್ಥಿಗಳ ತಾತ್ಕಾಲಿಕ ಅಂಕಪಟ್ಟಿಯನ್ನು ಕೆಇಎ ವೆಬ್‌ಸೈಟ್‌ನಲ್ಲಿ ಪ್ರಕಟಿಸಿ, ಅಭ್ಯರ್ಥಿಗಳಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿರುತ್ತದೆ. ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಶೀಲಿಸಿ ಪರಿಷ್ಕೃತ ತಾತ್ಕಾಲಿಕ ಅಭ್ಯರ್ಥಿಗಳ ಅಂಕಪಟ್ಟಿಯನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸದರಿ ಪರಿಷ್ಕೃತ ತಾತ್ಕಾಲಿಕ ಅಂಕಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ [email protected] ಗೆ ಇ-ಮೇಲ್ ಮೂಲಕ ಸಲ್ಲಿಸಬಹುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

https://www.facebook.com/photo/?fbid=3817108528507305&set=gm.1968513890247629&idorvanity=383606545405046

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular