BIG NEWS : ಭ್ರಷ್ಟ ಅಧಿಕಾರಿ ‘ಅಜಿತ್ ರೈ’ ನ್ಯಾಯಾಂಗ ಬಂಧನಕ್ಕೆ : ವಿಶೇಷ ಕೋರ್ಟ್ ಆದೇಶ

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ವಶದಲ್ಲಿದ್ದ ಅಜಿತ್ ರೈ ಯನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

ಲೋಕಾಯುಕ್ತ ಕಸ್ಟಡಿ ಅವಧಿ ಇಂದಿಗೆ ಮುಕ್ತಾಯವಾದ ಹಿನ್ನೆಲೆ ಅಜಿತ್ ರೈ ಅವರನ್ನು ಇಂದು ಕೋರ್ಟ್ಗೆ ಹಾಜರುಪಡಿಸಿದ ಲೋಕಾಯುಕ್ತ ಅಧಿಕಾರಿಗಳು, ಮತ್ತೆ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ಆದರೆ ವಿಚಾರಣೆ ನಡೆಸಿದ ಕೋರ್ಟ್ ‘ಅಜಿತ್ ರೈ’ ಯನ್ನು ನ್ಯಾಯಾಂಗ ವಶಕ್ಕೆ ನೀಡಿದ ವಿಶೇಷ ನ್ಯಾಯಾಲಯ ಜುಲೈ 11 ಕ್ಕೆ ವಿಚಾರಣೆ ಮುಂದೂಡಿದೆ.

ಜೂನ್ 28 ರಂದು ಅಜಿತ್ ರೈ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆದಿತ್ತು. ದಾಳಿ ವೇಳೆ ಅಕ್ರಮ ಆಸ್ತಿ, ಲಕ್ಷಾಂತರ ರೂ ಹಣ ಪತ್ತೆಯಾಗಿತ್ತು. ನಗರದ ಕೆ.ಆರ್.ಪುರಂ ತಹಶೀಲ್ದಾರ್ ಅಜಿತ್ ರೈ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಬರೋಬ್ಬರಿ 40 ಲಕ್ಷಕ್ಕೂ ಹೆಚ್ಚು ನಗದು ಸೇರಿದಂತೆ ವಿವಿಧ ಅಕ್ರಮ ಆಸ್ತಿಗಳನ್ನು ಪತ್ತೆ ಹಚ್ಚಿದ್ದರು. ದಾಳಿ ವೇಳೆ ಅಜಿತ್ ರೈಗೆ ಸೇರಿದ 100 ಎಕರೆಗೂ ಅಧಿಕ ವಿವಿಧ ಆಸ್ತಿ ಪತ್ರಗಳು ಸಿಕ್ಕಿದ್ದವು , ಅಜಿತ್ ರೈ ಸಂಬಂಧಿಕರು, ಸ್ನೇಹಿತರ ಹೆಸರಲ್ಲೂ ಆಸ್ತಿ ಪತ್ರಗಳು, ಅಲ್ಲದೇ ಆಪ್ತರ ಮನೆಯಲ್ಲಿ ನಾಲ್ಕು ಫಾರ್ಚೂನರ್ ಕಾರುಗಳು ಪತ್ತೆಯಾಗಿತ್ತು . ಅಜಿತ್ ಆಸ್ತಿಪತ್ರಗಳನ್ನು ಕಂಡು ಅಧಿಕಾರಿಗಳೇ ದಂಗಾಗಿದ್ದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read