ಬೆಂಗಳೂರು: ‘ಸ್ಮಾರ್ಟ್ ಮೀಟರ್’ ಟೆಂಡರ್ ನಲ್ಲಿ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಕೆ.ಜೆ. ಚಾರ್ಜ್ ಗೆ ರಿಲೀಫ್ ಸಿಕ್ಕಿದೆ . ಜನಪ್ರತಿನಿಧಿಗಳ ಆದೇಶಕ್ಕೆ ಹೈಕೊರ್ಟ್ ತಡೆ ನೀಡಿದೆ.
ಸ್ಮಾರ್ಟ್ ಮೀಟರ್ ಟೆಂಡರ್ ನಲ್ಲಿ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಕೆ.ಜೆ. ಚಾರ್ಜ್ ಗೆ ಹಾಗೂ ಇತರೆ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿತ್ತು.
ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ, ಶಾಸಕರಾದ ಎಸ್.ಆರ್. ವಿಶ್ವನಾಥ್ ಮತ್ತು ಧೀರಜ್ ಮುನಿರಾಜು ಅವರು ಸಲ್ಲಿಸಿದ್ದ ಖಾಸಗಿ ದೂರು ಅರ್ಜಿ ಸಂಬಂಧ ಕಳೆದ ಬುಧವಾರ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ಆದೇಶ ನೀಡಿತ್ತು. ಸಚಿವ ಜಾರ್ಜ್ ಕೇಸ್ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಜನಪ್ರತಿನಿಧಿಗಳ ಆದೇಶಕ್ಕೆ ಹೈಕೊರ್ಟ್ ತಡೆ ನೀಡಿದೆ.
ಸ್ಮಾರ್ಟ್ ಮೀಟರ್ ಸೇವೆ ಒದಗಿಸುವ ನಿಟ್ಟಿನಲ್ಲಿ 2024ರ ಸೆಪ್ಟೆಂಬರ್ 26ರಂದು ದಾವಣಗೆರೆ ರಾಜೇಶ್ವರಿ ಎಲೆಕ್ಟ್ರಿಕಲ್ ಸೆಲ್ ಕಂಪನಿಗೆ ಟೆಂಡರ್ ನೀಡಲಾಗಿದೆ. ನೇರವಾಗಿ ಟೆಂಡರ್ ನೀಡಲಾಗಿದ್ದು, ಇದು ಕರ್ನಾಟಕ ಸಾರ್ವಜನಿಕ ಖರೀದಿಯಲ್ಲಿ ಪಾರದರ್ಶಕತೆ(ಕೆಟಿಪಿಪಿ) ಅಧಿನಿಯಮ -2000, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ ನಿಯಮಗಳಿಗೆ ವಿರುದ್ಧವಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸ್ಮಾರ್ಟ್ ಮೀಟರ್ ಟೆಂಡರ್ ನಲ್ಲಿ ಭ್ರಷ್ಟಾಚಾರ ಆರೋಪ ಸಂಬಂಧ ಎಫ್ಐಆರ್ ದಾಖಲಿಸುವಂತೆ ಆದೇಶ ಹೊರಡಿಸಲಾಗಿತ್ತು.