ಚೆನ್ನೈ: 20 ಮಕ್ಕಳ ಸಾವಿಗೆ ಸಂಬಂಧಿಸಿದಂತೆ ಕೋಲ್ಡ್ರಿಫ್ ಸಿರಪ್ ತಯಾರಕ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿ ಮಾಲೀಕನನ್ನು ಬಂಧಿಸಲಾಗಿದೆ.
ಕೋಲ್ಡ್ರಿಫ್ ಕೆಮ್ಮಿನ ಸಿರಪ್ ತಯಾರಿಸಿದ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಮಾಲೀಕ ಎಸ್. ರಂಗನಾಥನ್ ಅವರನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ. ರಾಜ್ಯದಲ್ಲಿ ಹಲವಾರು ಮಕ್ಕಳ ಸಾವಿಗೆ ಕೋಲ್ರಿಫ್ ಸಂಬಂಧವಿದೆ.
ಮಧ್ಯಪ್ರದೇಶ ಮತ್ತು ತಮಿಳುನಾಡು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ರಂಗನಾಥನ್ ಅವರನ್ನು ಚೆನ್ನೈನಲ್ಲಿ ಬಂಧಿಸಲಾಗಿದೆ. ಬುಧವಾರ ರಾತ್ರಿ ಅವರನ್ನು ವಶಕ್ಕೆ ಪಡೆಯಲಾಗಿದ್ದು, ಈಗ ಅವರನ್ನು ವಿಚಾರಣೆ ನಡೆಸಲಾಗುತ್ತಿದೆ. ಮಧ್ಯಪ್ರದೇಶದ ಚಿಂದ್ವಾರ ಪೊಲೀಸರು ರಂಗನಾಥನ್ ಬಂಧನಕ್ಕೆ 20,000 ರೂಪಾಯಿ ಬಹುಮಾನ ಘೋಷಿಸಿದ ನಂತರ ಈ ಬಂಧನವಾಗಿದೆ.