HomeKarnataka'ಚಂದ್ರಯಾನ-3' ಸಾಫ್ಟ್ ಲ್ಯಾಂಡಿಂಗ್ ಗೆ ಕ್ಷಣಗಣನೆ : ರಾಜ್ಯದೆಲ್ಲೆಡೆ ಹೋಮ ಹವನ, ಪ್ರಾರ್ಥನೆ

‘ಚಂದ್ರಯಾನ-3’ ಸಾಫ್ಟ್ ಲ್ಯಾಂಡಿಂಗ್ ಗೆ ಕ್ಷಣಗಣನೆ : ರಾಜ್ಯದೆಲ್ಲೆಡೆ ಹೋಮ ಹವನ, ಪ್ರಾರ್ಥನೆ

ಚಂದ್ರಯಾನ-3 ಸಾಫ್ಟ್ ಲ್ಯಾಂಡಿಂಗ್ ಗೆ ಕ್ಷಣಗಣನೆಯಾಗಿದ್ದು, ರಾಜ್ಯದೆಲ್ಲೆಡೆ ಹೋಮ ಹವನ, ಪ್ರಾರ್ಥನೆ ಜೋರಾಗಿದೆ. ಚಂದ್ರಯಾನ-3 ಯಶಸ್ವಿಯಾಗಲೆಂದು ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ.

ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಮಠದಲ್ಲಿ ರುದ್ರಾಭಿಷೇಕ ಮತ್ತು ವಿಶೇಷ ಪೂಜೆ ನೆರವೇರಿಸಲಾಯಿತು. ಚಂದ್ರಯಾನ ರಾಕೇಟ್ ಭಾವಚಿತ್ರ ಹಿಡಿದು ಪೂಜೆ ಸಲ್ಲಿಸಿ ಲ್ಯಾಂಡರ್ ಸುರಕ್ಷಿತವಾಗಿ ಚಂದ್ರ ಮೇಲೆ ಇಳಿಯಲೆಂದು ಪ್ರಾರ್ಥಿಸಲಾಯಿತು.

ಚಂದ್ರಯಾನ 3 ಯಶಸ್ವಿಗಾಗಿ ನಗರದ ಗವಿಗಂಗಾದರೇಶ್ವರ ದೇವಸ್ಥಾನದಲ್ಲಿ ಹೋಮ-ಹವನ ನಡೆಯುತ್ತಿದೆ. ಚಂದ್ರನ ಮೇಲೆ ಚಂದ್ರಯಾನ-3 ಯಶಸ್ವಿಯಾಗಲಿ ಎಂದು ನವಗ್ರಹಗಳ ಪೂಜೆ ಹಾಗೂ ಚಂದ್ರ ಹೋಮ ನಡೆಯುತ್ತಿದೆ.ಅದೇ ರೀತಿ ಸಾಗರ ತಾಲೂಕಿನ ಸಿಗಂಧೂರು ಚೌಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಗಿದೆ. ದುರ್ಗಾ ಸಪ್ತಸತಿ ಪಾರಾಯಣ, ಚಂಡಿಕಾ ಹೋಮ ನಡೆಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭಾರತಕ್ಕೆ ಇಂದು ಅತ್ಯಂತ ಮಹತ್ವದ ದಿನ. ಭಾರತದ ಚಂದ್ರಯಾನ-3 ಬಹಳ ವಿಶೇಷ ಹಂತವನ್ನು ತಲುಪಲಿದೆ. ಆಗಸ್ಟ್ 23, 2023 ರ ಬುಧವಾರ ಸಂಜೆ 6.30 ಕ್ಕೆ ಭಾರತದ ಚಂದ್ರಯಾನ 3 ಚಂದ್ರನ ಮೇಲೆ ಇಳಿಯಲಿದೆ. ಚಂದ್ರಯಾನ-3 ಯಶಸ್ವಿಗಾಗಿ ಕೋಟ್ಯಾಂತರ ಜನ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular