HomeIndiaಹರಿತ ಆಯುಧದಿಂದ ಹಲ್ಲೆಗೈದು ಮಲಗಿದ್ದಲ್ಲೇ ಮೂವರ ಹತ್ಯೆ: ಪುತ್ರನ ವಿಚಾರಣೆ

ಹರಿತ ಆಯುಧದಿಂದ ಹಲ್ಲೆಗೈದು ಮಲಗಿದ್ದಲ್ಲೇ ಮೂವರ ಹತ್ಯೆ: ಪುತ್ರನ ವಿಚಾರಣೆ

ಜೈಪುರ: ರಾಜಸ್ಥಾನದ ನಗೌರ್ ಜಿಲ್ಲೆಯಲ್ಲಿ ದಂಪತಿ, ಪುತ್ರಿ ಮಲಗಿದ್ದಾಗ ಕಡಿದು ಕೊಂದ ಘಟನೆ ನಡೆದಿದ್ದು, ಕೊಲೆಯಲ್ಲಿ ಪುತ್ರನ ಪಾತ್ರವಿದೆ ಎಂದು ಶಂಕಿಸಿರುವ ಪೊಲೀಸರು ಮೃತ ದಂಪತಿ ಮಗನನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಪಡುಕಳನ್ ಪಟ್ಟಣದ ನಿವಾಸಿ ದಿಲೀಪ್ ಸಿಂಗ್(45), ಅವರ ಪತ್ನಿ ರಾಜೇಶ್ ಕನ್ವರ್(40) ಮತ್ತು ಪುತ್ರಿ ಪ್ರಿಯಾಂಕಾ(15) ಅವರನ್ನು ಶನಿವಾರ ರಾತ್ರಿ ವ್ಯಕ್ತಿಯೊಬ್ಬ ಹರಿತವಾದ ಆಯುಧದಿಂದ ಹಲ್ಲೆ ನಡೆಸಿ ಹತ್ಯೆಗೈದಿದ್ದಾನೆ ಎಂದು ಪಡುಕಳನ್ ಎಸ್‌ಹೆಚ್‌ಒ ಮಾನವೇಂದ್ರ ಸಿಂಗ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಾಥಮಿಕ ತನಿಖೆಯ ನಂತರ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಂಪತಿಯ ಪುತ್ರನೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು ಮಗನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular