ಬೆಳಗಾವಿ: ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೂಗನೊಳ್ಳಿ ಸಮೀಪ ನಿಂತಿದ್ದ ಕಾರ್ ಗೆ ಕಂಟೇನರ್ ಲಾರಿ ಡಿಕ್ಕಿ ಹೊಡೆದು ದಂಪತಿ ಮೃತಪಟ್ಟಿದ್ದಾರೆ.
ಕೊಲ್ಲಾಪುರ ಮೂಲದ ಜಿಗರ್ ನಾಕ್ರಾನಿ ಹಾಗೂ ಅವರ ಪತ್ನಿ ಮೃತಪಟ್ಟಿದ್ದಾರೆ. ಹುಬ್ಬಳ್ಳಿಯಿಂದ ಕೊಲ್ಲಾಪುರಕ್ಕೆ ತೆರಳುವ ಮಾರ್ಗ ಮಧ್ಯೆ ಕೂಗನೊಳ್ಳಿ ಸಮೀಪ ಕಾರ್ ನಿಲ್ಲಿಸಿದ್ದಾರೆ. ಈ ವೇಳೆ ವೇಗವಾಗಿ ಬಂದ ಕಂಟೇನರ್ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿದ್ದ ಜಿಗರ್ ನಾಕ್ರಾನಿ ದಂಪತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ನಿಪ್ಪಾಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

