HomeLatest NewsBREAKING: 5 ಮಂದಿ ಸವಾರಿ ಮಾಡ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಗೋಡೆಗೆ ಡಿಕ್ಕಿ: ದಂಪತಿ ಸೇರಿ...

BREAKING: 5 ಮಂದಿ ಸವಾರಿ ಮಾಡ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಗೋಡೆಗೆ ಡಿಕ್ಕಿ: ದಂಪತಿ ಸೇರಿ ಮೂವರು ಸಾವು

ಜೈಪುರ: ರಾಜಸ್ಥಾನದಲ್ಲಿ ರಸ್ತೆಯಲ್ಲಿ ಸಾಗುತ್ತಿದ್ದ ಬೈಕ್ ಜಾರಿ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಮತ್ತು ಅಪ್ರಾಪ್ತೆ ಸಾವು ಕಂಡಿದ್ದಾರೆ.

ಜೈಪುರ ಜಿಲ್ಲೆಯ ಜಾಮ್ವರಮ್‌ಗಢ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ಐವರು ಒಂದೇ ಬೈಕ್‌ನಲ್ಲಿ ಹೋಗುತ್ತಿದ್ದಾಗ, ಮಿತಿಮೀರಿದ ವೇಗದ ಚಾಲನೆಯಿಂದಾಗಿ ಸಮತೋಲನ ಕಳೆದುಕೊಂಡು ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಮತ್ತು ಅವರ ನಾಲ್ಕು ವರ್ಷದ ಸೊಸೆ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಐವರೂ ಒಂದೇ ಮೋಟಾರ್ ಸೈಕಲ್‌ನಲ್ಲಿ ಹೋಗುತ್ತಿದ್ದಾಗ, ಅದು ಮಿತಿಮೀರಿದ ಚಾಲನೆಯಿಂದಾಗಿ ಸಮತೋಲನ ಕಳೆದುಕೊಂಡು ಗೋಡೆಗೆ ಡಿಕ್ಕಿ ಹೊಡೆದಿದೆ. ಮೃತರನ್ನು ಖ್ವಾರಾನಿಜಿ ಗ್ರಾಮದ ನಿವಾಸಿಗಳಾದ ಮತಾದೀನ್(30), ಅವರ ಪತ್ನಿ ಮನೀಷಾ ದೇವಿ(26) ಮತ್ತು ಅವರ ಸೊಸೆ ಅನುಷ್ಕಾ(4) ಎಂದು ಗುರುತಿಸಲಾಗಿದೆ ಎಂದು ಜಾಮ್ವರಮ್‌ಗಢ ಎಎಸ್‌ಐ ಮಹೇಂದ್ರ ಸಿಂಗ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular