HomeLatest NewsSHOCKING: ಸಾಲದ ಹೊರೆಯಿಂದ 4 ವರ್ಷದ ಮಗನಿಗೆ ವಿಷಪ್ರಾಶನ ಮಾಡಿ ಯುವ ಉದ್ಯಮಿ ದಂಪತಿ ಆತ್ಮಹತ್ಯೆ

SHOCKING: ಸಾಲದ ಹೊರೆಯಿಂದ 4 ವರ್ಷದ ಮಗನಿಗೆ ವಿಷಪ್ರಾಶನ ಮಾಡಿ ಯುವ ಉದ್ಯಮಿ ದಂಪತಿ ಆತ್ಮಹತ್ಯೆ

ಶಹಜಹಾನ್‌ ಪುರ(ಉತ್ತರಪ್ರದೇಶ): ಉತ್ತರ ಪ್ರದೇಶದ ಶಹಜಹಾನ್‌ ಪುರದಲ್ಲಿ ತೀವ್ರ ಆರ್ಥಿಕ ಸಾಲದ ಹೊರೆಯಿಂದ ದಂಪತಿಗಳು ತಮ್ಮ4 ವರ್ಷದ ಮಗನಿಗೆ ವಿಷಪ್ರಾಶನ ಮಾಡಿ ಆತ್ಮಹತ್ಯೆ ಮಾಡಿಕೊಂಡರು ಎಂದು ಪೊಲೀಸರು ತಿಳಿಸಿದ್ದಾರೆ.

ಬುಧವಾರ ಬೆಳಿಗ್ಗೆ ಪ್ರತ್ಯೇಕ ಕೋಣೆಗಳಲ್ಲಿ ಸಂಬಂಧಿಕರು ಮೂವರ ಶವಗಳನ್ನು ಪತ್ತೆ ಮಾಡಿದ್ದಾರೆ. ಕೈಮಗ್ಗ ಉದ್ಯಮಿ ಸಚಿನ್ ಗ್ರೋವರ್(30) ಮತ್ತು ಅವರ ಪತ್ನಿ ಶಿವಾನಿ(28) ಸಾಲದಲ್ಲಿ ಸಿಲುಕಿದ್ದಾರೆ. ಸ್ಥಳದಿಂದ ಡೆತ್ ನೋಟ್ ವಶಪಡಿಸಿಕೊಳ್ಳಲಾಗಿದ್ದು, ಅದರಲ್ಲಿ ಸಚಿನ್ ಹೆಚ್ಚುತ್ತಿರುವ ಸಾಲ ಮತ್ತು ಆದಾಯದ ಕೊರತೆಯಿಂದ ತಾನು ತೀವ್ರ ನೊಂದಿದ್ದೇನೆ ಎಂದು ಬರೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನನ್ನ ಕುಟುಂಬದೊಂದಿಗೆ ನನಗೆ ಯಾವುದೇ ದೂರುಗಳಿಲ್ಲ; ಅವರೆಲ್ಲರೂ ನನ್ನನ್ನು ಬೆಂಬಲಿಸಿದರು. ಸಾಲವನ್ನು ತೀರಿಸಲು ದಯವಿಟ್ಟು ನಮ್ಮ ಕಾರ್ ಮತ್ತು ಮನೆಯನ್ನು ಮಾರಾಟ ಮಾಡಿ, ಇದರಿಂದ ನಮ್ಮ ಸಾಲ ತೀರಿಸಲಾಗಿಲ್ಲ ಎಂದು ಯಾರೂ ಹೇಳಬಾರದು ಎಂದು ಸಚಿನ್ ಡೆತ್ ನೋಟ್ ನಲ್ಲಿ ಬರೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಂಪತಿಗಳು ಮಂಗಳವಾರ ರಾತ್ರಿ ಸೀಲಿಂಗ್ ಫ್ಯಾನ್‌ ಗಳಿಗೆ ನೇಣು ಬಿಗಿದುಕೊಂಡರು, ಆದರೆ ಮಗುವಿನ ಶವ ಮತ್ತೊಂದು ಕೋಣೆಯಲ್ಲಿ ಪತ್ತೆಯಾಗಿದೆ. ಪ್ರಾಥಮಿಕವಾಗಿ, ಪೋಷಕರು ಮೊದಲು ತಮ್ಮ ಮಗನಿಗೆ ವಿಷ ನೀಡಿ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತೋರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳವಾರ ಸಂಜೆ ತನ್ನ ಮಗ ಬ್ಯಾಂಕಿನಲ್ಲಿ 5 ಲಕ್ಷ ರೂಪಾಯಿ ಠೇವಣಿ ಇಡಬೇಕೆಂದು ಹೇಳಿದ್ದ. ಆದರೆ, 3 ಲಕ್ಷ ರೂಪಾಯಿ ವ್ಯವಸ್ಥೆ ಮಾಡುವಲ್ಲಿ ಯಶಸ್ವಿಯಾಗಿದ್ದನು, ಅದಕ್ಕಾಗಿ ಅವನು ಸಂಕಷ್ಟದಲ್ಲಿದ್ದ ಎಂದು ಸಚಿನ್ ತಾಯಿ ಪೊಲೀಸರಿಗೆ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular