ಧರ್ಮಸ್ಥಳ ನೇತ್ರಾವತಿ ನದಿಯಲ್ಲಿ ದಂಪತಿ ಮೃತದೇಹ ಪತ್ತೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಧರ್ಮಸ್ಥಳ ಸಮೀಪ ನೇತ್ರಾವತಿ ನದಿಯಲ್ಲಿ ಭಾನುವಾರ ದಂಪತಿಯ ಮೃತದೇಹ ಪತ್ತೆಯಾಗಿದೆ.

ಚಿಂತಾಮಣಿ ತಾಲೂಕಿನ ಮದ್ದಿರೆಡ್ಡಿ(61), ಈಶ್ವರಮ್ಮ(52) ಮೃತಪಟ್ಟ ದಂಪತಿ ಎಂದು ಗುರುತಿಸಲಾಗಿದೆ. ಅ. 31 ರಂದು ದಂಪತಿ ಮನೆಯಿಂದ ನಾಪತ್ತೆಯಾಗಿದ್ದು, ಕುಟುಂಬದವರು ಅನುಮಾನಗೊಂಡು ಹುಡುಕಾಟ ನಡೆಸಿದ್ದಾರೆ. ಇಬ್ಬರನ್ನ ಹುಡುಕಿಕೊಂಡು ಅವರು ಧರ್ಮಸ್ಥಳಕ್ಕೆ ಬಂದಿದ್ದು, ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಸಂಶಯದಲ್ಲಿ ಶೌರ್ಯ ತಂಡ ಮತ್ತು ಪೊಲೀಸರ ಸಹಕಾರದೊಂದಿಗೆ ನೇತ್ರಾವತಿ ನದಿಯ ಸ್ನಾನಘಟ್ಟ ಸೇರಿ ಹಲವೆಡೆ ಹುಡುಕಾಟ ನಡೆಸಿದ್ದಾರೆ.

ದೋಂಡೋಲೆ ಸಮೀಪ ಪವರ್ ಪ್ರಾಜೆಕ್ಟ್ ಅಣೆಕಟ್ಟೆಯಲ್ಲಿ ಮೃತದೇಹ ಸಿಲುಕಿಕೊಂಡಿರುವುದು ಕಂಡುಬಂದಿದೆ. ಧರ್ಮಸ್ಥಳದ ಶೌರ್ಯ ವಿಪತ್ತು ನಿರ್ವಹಣಾ ತಂಡದವರು ಮೃತದೇಹಗಳನ್ನು ಮೇಲೆ ತಂದಿದ್ದಾರೆ. ಸ್ಥಳಕ್ಕೆ ಧರ್ಮಸ್ಥಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇವರು ನ. 1ರಂದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read