HomeKarnatakaBIG NEWS: ಸಾಲಬಾಧೆಗೆ ದಂಪತಿ ಆತ್ಮಹತ್ಯೆಗೆ ಯತ್ನ: ಪತಿ ಸಾವು; ಪತ್ನಿ ಸ್ಥಿತಿ ಗಂಭೀರ

BIG NEWS: ಸಾಲಬಾಧೆಗೆ ದಂಪತಿ ಆತ್ಮಹತ್ಯೆಗೆ ಯತ್ನ: ಪತಿ ಸಾವು; ಪತ್ನಿ ಸ್ಥಿತಿ ಗಂಭೀರ

ತುಮಕೂರು: ಸಾಲಬಾಧೆಗೆ ಬೇಸತ್ತು ದಂಪತಿ ಆತ್ಮಹತ್ಯೆಗೆ ಯತ್ನಿಸಿದ್ದು, ಪತಿ ಸಾವನ್ನಪ್ಪಿದ್ದು, ಪತ್ನಿ ಸ್ಥಿತಿ ಗಂಭೀರವಾಗಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದ ಹೌಸಿಂಗ್ ಬೋರ್ಡ್ ನಲ್ಲಿ ನಡೆದಿದೆ.

47 ವರ್ಷದ ಅನೀಲ್ ಮೃತ ವ್ಯಕ್ತಿ. ಪತ್ನಿ ಉಮಾ (45) ಸ್ಥಿತಿ ಗಂಭೀರವಾಗಿದೆ. ಅನೀಲ್ ಕಗ್ಗೆರೆ ಗ್ರಾಮದವರಾಗಿದ್ದು, ದಂಪತಿ ಹೌಸಿಂಗ್ ಬೋರ್ಡ್ ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಕುಣಿಗಲ್ ನಲ್ಲಿ ಎಲೆಕ್ಟ್ರಾನಿಕ್ ಅಂಗಡಿ ಇಟ್ಟುಕೊಂಡು ಜಿವನ ಸಾಗಿಸುತ್ತಿದ್ದ ಅನೀಲ್ ಇತ್ತೀಚೆಗೆ ಆನ್ ಲೈನ್ ನಲ್ಲಿ ಹಣ ಹೂಡಿಕೆ ಮಾಡಿದ್ದರು. 8-10 ಲಕ್ಷ ಸಾಲ ಮಾಡಿದ್ದರು ಎನ್ನಲಾಗಿದೆ. ಸಾಲಗಾರರ ಕಿರುಕುಳಕ್ಕೆ ಬೇಸತ್ತು ದಂಪತಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅನೀಲ್ ಮನೆಯಲ್ಲಿಯೇ ಸಾವನ್ನಪ್ಪಿದ್ದಾರೆ. ಪತ್ನಿ ಸ್ಥಿತಿ ಗಂಭೀರವಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ನೆರೆಹೊರೆಯವರು ಉಮಾ ಅವರನ್ನು ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕುಣಿಗಲ್ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular