HomeKarnatakaವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆ: ಕಾಂಗ್ರೆಸ್​​ನಿಂದ ಆಮಿಷ: ಗಿಫ್ಟ್ ಕೂಪನ್, ಹಣ ಹಂಚಿಕೆ:...

ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆ: ಕಾಂಗ್ರೆಸ್​​ನಿಂದ ಆಮಿಷ: ಗಿಫ್ಟ್ ಕೂಪನ್, ಹಣ ಹಂಚಿಕೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬೆಂಗಳೂರು: ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನಲೆ ಕಾಂಗ್ರೆಸ್ ನಾಯಕರು ಆಮಿಷವೊಡ್ಡುತ್ತಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾಅರಾಯಣಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಗಿಫ್ಟ್ ಕೂಪನ್‌, ಫ್ಲಾಸ್ಕ್, ಟಿಫಿನ್ ಬಾಕ್ಸ್ ಮತ್ತು ಹಣವನ್ನು ಹಂಚುವ ಮೂಲಕ ಮತದಾರರನ್ನು ಸೆಳೆಯಲು ಯತ್ನಿಸುತ್ತಿದ್ದಾರೆ ಎಂದು ಪರಿಷತ್​​ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪುಟ್ಟಣ್ಣರಿಂದ ದಸರಾ ಹಬ್ಬದ ಶುಭಾಶಯಗಳು ಎನ್ನುವ ಗಿಫ್ಟ್ ಕೂಪನ್ ಕಾರ್ಡ್ ಹಂಚಲಾಗಿದೆ. ಈ ಗಿಫ್ಟ್ ಕಾರ್ಡ್​​ಗಳನ್ನು ಕೊಟ್ಟು ಲುಲು ಮಾಲ್​​ನಲ್ಲಿ ವಸ್ತು ತೆಗೆದುಕೊಳ್ಳುವಂತೆ ಹೇಳಿದ್ದಾರೆ. ಬಿಇಒಗಳ ಮೂಲಕ ಗಿಫ್ಟ್ ಕೂಪನ್ ಹಂಚುವ ಕೆಲಸ ನಡೆಯುತ್ತಿದ್ದು, ಹಣದ ಆಮಿಷ ಒಡ್ಡುವ ಕೆಲಸವೂ ನಡೆಯುತ್ತಿದೆ ಎಂದರು.

ನಿಮಗೆ ಏನಾದರೂ ಮಾನ ಮರ್ಯಾದೆ ಇದೆಯಾ? ಈ ರೀತಿಯಲ್ಲಿ ನೀವು ಶಾಸಕರಾಗಬೇಕಾ? ಕಾಂಗ್ರೆಸ್​​ನವರು ಇದಕ್ಕೆ ಉತ್ತರಿಸಬೇಕಿದೆ. ಇದು ವೋಟ್ ಚೋರಿ ಅಲ್ಲ ಅಂತಾ ಹೇಳಿ ನೋಡೋಣ ಎಂದ ಛಲವಾದಿ ನಾರಾಯಣಸ್ವಾಮಿ, ಕಾಂಗ್ರೆಸ್ ಅಭ್ಯರ್ಥಿ ಜೊತೆ ಶಾಮೀಲಾಗಿರುವ ಬಿಇಒಗಳ ಫೋಟೋ ಬಿಡುಗಡೆ ಮಾಡುತ್ತೇವೆ ಎಂದೂ ತಿಳಿಸಿದ್ದಾರೆ.

ಪ್ರಿಯಾಂಕಾ ಗಾಂಧಿ ಪುತ್ರನ ಛಾಯಾಚಿತ್ರ ಪ್ರದರ್ಶನಕ್ಕೆ ಅಡ್ಡಿ: 74 ಛಾಯಾಚಿತ್ರಗಳನ್ನು ತೆರವುಗೊಳಿಸಿದ ಬಿಕಾನೆರ್ ಹೌಸ್: ಕಾಂಗ್ರೆಸ್ ಆಕ್ರೋಶ

ನವದೆಹಲಿ: ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪುತ್ರ, ಛಾಯಾಗ್ರಾಹಕ ರೆಹಾನ್ ವಾದ್ರಾ ಆಯೋಜಿಸಿದ್ದ ಏಕವ್ಯಕ್ತಿ ಕಲಾ ಪ್ರದರ್ಶನ ಆರಂಭಕ್ಕೂ ಮುನ್ನವೇ ಭಾರಿ ವಿವಾದಕ್ಕೆ ಕಾರಣವಾಗಿದೆ. ನವದೆಹಲಿಯ ಪ್ರತಿಷ್ಠಿತ ಬಿಕಾನೆರ್ ಹೌಸ್‌ನಲ್ಲಿ ಆಯೋಜಿಸಲಾಗಿದ್ದ ಪ್ರದರ್ಶನದಲ್ಲಿ, 74 ಛಾಯಾಚಿತ್ರಗಳನ್ನು ತೆರವುಗೊಳಿಸಲಾಗಿದೆ.

ದೆಹಲಿಯಲ್ಲಿ ಇತ್ತೀಚೆಗೆ ನಡೆದ ವಿದ್ಯಾರ್ಥಿ ಮತ್ತು ಯುವಕರ ಪ್ರತಿಭಟನೆಗಳನ್ನು ಬಿಂಬಿಸುವ ಸುಮಾರು 74 ಛಾಯಾಚಿತ್ರಗಳನ್ನು ಬಿಕಾನೆರ್ ಹೌಸ್‌ ನಿಂದ ಆಡಳಿತ ಮಂಡಳಿಯು ಬಲವಂತವಾಗಿ ತೆರವುಗೊಳಿಸಿದೆ ಎಂದು ತಿಳಿದುಬಂದಿದೆ.

ರೆಹಾನ್ ವಾದ್ರಾ ‘ನೋ ಐಡಿಯಾ ಈಸ್ ಫೈನಲ್’ (No Idea is Final) ಹೆಸರಿನಲ್ಲಿ ತಮ್ಮ ಮೂರನೇ ಏಕವ್ಯಕ್ತಿ ಕಲಾ ಪ್ರದರ್ಶನವನ್ನು ಆಯೋಜಿಸಿದ್ದರು. ಇದರಲ್ಲಿ ವನ್ಯಜೀವಿಗಳು, ಅಮೂರ್ತ ಕಲೆ ಮತ್ತು ಕಳೆದ ಆರು ತಿಂಗಳಲ್ಲಿ ದೆಹಲಿಯಲ್ಲಿ ನಡೆದ ಯುವ ಚಳವಳಿಗಳ ಬೀದಿ ಛಾಯಾಗ್ರಹಣ ಸೇರಿದಂತೆ 100ಕ್ಕೂ ಹೆಚ್ಚು ಕಲಾಕೃತಿಗಳನ್ನು ಇರಿಸಲಾಗಿತ್ತು. ಆದರೆ, ಪ್ರದರ್ಶನ ಆರಂಭವಾಗಲು ಕೆಲವೇ ಗಂಟೆಗಳು ಬಾಕಿ ಇರುವಾಗ, ಪ್ರದರ್ಶನದ ಬಹುತೇಕ ಅರ್ಧ ಭಾಗವನ್ನು ಅಂದರೆ 74 ಫೋಟೋಗಳು ತೆಗೆದುಹಾಕುವಂತೆ ಬಿಕಾನೆರ್ ಹೌಸ್ ಆಡಳಿತ ಸೂಚಿಸಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ರೆಹಾನ್ ವಾದ್ರಾ, “ಸಂಜೆ 5 ಗಂಟೆಯೊಳಗೆ ಪ್ರತಿಭಟನಾ ಚಿತ್ರಗಳನ್ನು ತೆಗೆಯದಿದ್ದರೆ ಇಡೀ ಪ್ರದರ್ಶನವನ್ನೇ ರದ್ದುಗೊಳಿಸುವುದಾಗಿ ಮಧ್ಯಾಹ್ನ 3.30ಕ್ಕೆ ಆಡಳಿತ ಎಚ್ಚರಿಕೆ ನೀಡಿತು. ದೇಶದ ಪ್ರಸ್ತುತ ರಾಜಕೀಯ ವಾತಾವರಣದಲ್ಲಿ ಇಂತಹ ಫೋಟೋಗಳನ್ನು ಪ್ರದರ್ಶಿಸಲು ಇದು ಸರಿಯಾದ ಸಮಯವಲ್ಲ ಎಂದು ಸಮರ್ಥಿಸಿಕೊಂಡರು” ಎಂದು ತಿಳಿಸಿದ್ದಾರೆ.

ತ್ರಿವರ್ಣ ಧ್ವಜವನ್ನು ಒಳಗೊಂಡ ಎರಡು ಛಾಯಾಚಿತ್ರಗಳನ್ನು ತೆಗೆಯುವಂತೆ ಕೇಳಿದರು. ಆದರೆ ಭಾರತೀಯ ಧ್ವಜದ ಚಿತ್ರವನ್ನು ತೆಗೆದುಹಾಕಲು ನಾನು ಖಡಾಖಂಡಿತವಾಗಿ ನಿರಾಕರಿಸಿದೆ ಎಂದು ಇನ್‌ಸ್ಟಾಗ್ರಾಮ್‌ನಲ್ಲಿ ಬರೆದುಕೊಂಡಿದ್ದಾರೆ.

ಈ ಚಿತ್ರಗಳು ಯಾವುದೇ ರಾಜಕೀಯ ಸಂದೇಶ ಹೊಂದಿಲ್ಲ, ಸಮಾಜದಲ್ಲಿ ನಡೆಯುವುದನ್ನು ದಾಖಲಿಸುವುದು ಕಲಾವಿದನಾಗಿ ನನ್ನ ಕರ್ತವ್ಯ. ಪ್ರದರ್ಶನದ ಸಂಪೂರ್ಣ ವಿನ್ಯಾಸವನ್ನು ಮೊದಲೇ ನೀಡಿದ್ದರೂ ಕೊನೆ ಕ್ಷಣದಲ್ಲಿ ಶೇ.50 ಕಲಾಕೃತಿಗಳನ್ನು ಸೆನ್ಸಾರ್ ಮಾಡಲಾಗಿದೆ. ಮುಂದೆ ಸೂಕ್ತ ಸ್ಥಳ ಸಿಕ್ಕಾಗ ಇಡೀ ಸಂಗ್ರಹವನ್ನು ಸಾರ್ವಜನಿಕರಿಗೆ ಪ್ರದರ್ಶಿಸುತ್ತೇನೆ ಎಂದಿದ್ದಾರೆ.

ಈ ಘಟನೆ ಬೆನ್ನಲ್ಲೇ ಪ್ರಿಯಾಂಕಾ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಅತ್ಯಂತ ಹಾಸ್ಯಾಸ್ಪದ. ದೇಶಾದ್ಯಂತ ಯುವಕರ ಧ್ವನಿಯನ್ನು ಹೇಗೆ ಹತ್ತಿಕ್ಕಲಾಗುತ್ತಿದೆಯೋ ಹಾಗೆಯೇ ಇಲ್ಲಿ ಒಬ್ಬ ಯುವ ಕಲಾವಿದನ ಧ್ವನಿಯನ್ನು ಅಡಗಿಸಲಾಗುತ್ತಿದೆ. ಆ ಚಿತ್ರಗಳಲ್ಲಿ ಯಾರ ವಿರುದ್ಧವೂ ಅವಹೇಳನಕಾರಿ ಅಂಶಗಳಿರಲಿಲ್ಲ, ಕೇವಲ ನೈಜ ದೃಶ್ಯಗಳಿದ್ದವು. ಇದು ದೇಶದಲ್ಲಿ ಪ್ರಜಾಪ್ರಭುತ್ವ ಉಳಿದಿಲ್ಲ ಎಂಬುದನ್ನು ತೋರಿಸುತ್ತದೆ. ಇಂದು ನನ್ನ ಮಗನಿಗೆ ಹೀಗಾಗಿದೆ, ನಾಳೆ ಬೇರೊಬ್ಬ ಕಲಾವಿದನಿಗೂ ಇದು ಆಗಬಹುದು ಎಂದು ಕಿಡಿಕಾರಿದ್ದಾರೆ.

ಎಐಸಿಸಿ ಮುಖಂಡ ಪವನ್ ಖೇರಾ ಮಾತನಾಡಿ, ತ್ರಿವರ್ಣ ಧ್ವಜ ಕೂಡ ಸೆನ್ಸಾರ್ ಕತ್ತರಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದರೆ, ಸಮಸ್ಯೆ ಇರುವುದು ಕಲೆಯಲ್ಲಲ್ಲ, ಅಧಿಕಾರದಲ್ಲಿರುವವರ ಮನಸ್ಥಿತಿಯಲ್ಲಿ. ಕೇಂದ್ರ ಸರ್ಕಾರವು ಸ್ವತಂತ್ರ ಆಲೋಚನೆಗಳು ಮತ್ತು ಪ್ರತಿಭಟನೆಗಳಿಗೆ ಎಷ್ಟು ಹೆದರುತ್ತಿದೆ ಎಂಬುದಕ್ಕೆ ಇದೇ ಸಾಕ್ಷಿ ಎಂದು ಟೀಕಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular