HomeKarnatakaವೃತ್ತಿಪರ ಕೋರ್ಸ್ ಪ್ರವೇಶ: ಸಿಇಟಿ ಸೀಟು ಹಂಚಿಕೆಯಾದ ವಿದ್ಯಾರ್ಥಿಗಳಿಗೆ ಚಾಯ್ಸ್ ದಾಖಲಿಸಲು ಅವಕಾಶ

ವೃತ್ತಿಪರ ಕೋರ್ಸ್ ಪ್ರವೇಶ: ಸಿಇಟಿ ಸೀಟು ಹಂಚಿಕೆಯಾದ ವಿದ್ಯಾರ್ಥಿಗಳಿಗೆ ಚಾಯ್ಸ್ ದಾಖಲಿಸಲು ಅವಕಾಶ

ಬೆಂಗಳೂರು: ವೈದ್ಯಕೀಯ, ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಯಾದ ಅಭ್ಯರ್ಥಿಗಳಿಗೆ ಚಾಯ್ಸ್ ದಾಖಲಿಸಲು ಸೆಪ್ಟೆಂಬರ್ 4ರಂದು ಮಧ್ಯಾಹ್ನ 12 ಗಂಟೆಯವರೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಇಎ) ಅವಕಾಶ ನೀಡಿದೆ.

ಸೆಪ್ಟೆಂಬರ್ 3ರವರೆಗೆ 92,000 ಅಭ್ಯರ್ಥಿಗಳು ಆಯ್ಕೆ ಪೂರ್ಣಗೊಳಿಸಿದ್ದಾರೆ. ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿರುವ ಸುಮಾರು 15,000 ಅಭ್ಯರ್ಥಿಗಳು ಇನ್ನು ಚಾಯ್ಸ್ ದಾಖಲು ಮಾಡಿಲ್ಲ. ಶುಲ್ಕ ಪಾವತಿಗೆ ಸಂಜೆ 4 ಗಂಟೆವರೆಗೆ ಅವಕಾಶವಿದೆ. ನಿಗದಿತ ಅವಧಿಯೊಳಗೆ ದಾಖಲು ಮಾಡಿಕೊಳ್ಳದಿದ್ದರೆ ಅಂತಹ ಅಭ್ಯರ್ಥಿಗಳ ಸೀಟು ರದ್ದಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular