HomeKarnataka24 ಪ್ರಕರಣಗಳಲ್ಲಿ ಬೇಕಾಗಿದ್ದ, ಕೋರ್ಟ್ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

24 ಪ್ರಕರಣಗಳಲ್ಲಿ ಬೇಕಾಗಿದ್ದ, ಕೋರ್ಟ್ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಮಂಗಳೂರು: ಕಳವು ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಂಜನಾಡಿ ಗ್ರಾಮದ ಕಲ್ಲಟ್ಕ ನಿವಾಸಿ ಅಬ್ದುಲ್ ಫಯಾನ್(27) ಬಂಧಿತ ಆರೋಪಿ. ಕೊಣಾಜೆ, ಉಳ್ಳಾಲ, ಬರ್ಕೆ, ಉಪ್ಪಿನಂಗಡಿ, ಪುತ್ತೂರು, ಬಂಟ್ವಾಳ ಪೊಲೀಸ್ ಠಾಣೆಗಳಲ್ಲಿ ಈತನ ವಿರುದ್ಧ 24 ಪ್ರಕರಣ ದಾಖಲಾಗಿವೆ. ನ್ಯಾಯಾಲಯಕ್ಕೆ ಹಾಜರಾಗದೇ ಆರೋಪಿ ತಲೆಮರೆಸಿಕೊಂಡಿದ್ದ.

ಆತನ ವಿರುದ್ಧ ಕೋರ್ಟ್ ವಾರೆಂಟ್ ಹೊರಡಿಸಿದ್ದು, ಕೊಣಾಜೆ ಪೊಲೀಸ್ ಠಾಣೆ ಪ್ರಕರಣದಲ್ಲಿ ಒಂದು ವರ್ಷದಿಂದ ಕೋರ್ಟ್ ಹಾಜರಾಗದೆ ತಲೆಮರೆಸಿಕೊಂಡಿದ್ದ. ಅ. 13ರಂದು ಕೊಣಾಜೆ ಪೊಲೀಸ್ ನಿರೀಕ್ಷಕ ಬಿ. ರಾಜೇಂದ್ರ, ಉಪನಿರೀಕ್ಷಕ ಎಸ್. ನಾಗರಾಜ, ಸಿಬ್ಬಂದಿ ಮೊಹಮ್ಮದ್ ಶರೀಫ್, ಸಂತೋಷ್ ಕೇರಳದ ಮಂಜೇಶ್ವರ ಬಳಿ ಆರೋಪಿಯನ್ನು ದಸ್ತಗಿರಿ ಮಾಡಿ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ಆತನನ್ನು ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular