HomeKarnatakaBREAKING: ಜಪ್ತಿಯಾಗಿದ್ದ ಜಯಲಲಿತಾ ಒಡವೆ ಹಿಂತಿರುಗಿಸಲು ದಿನಾಂಕ ಫಿಕ್ಸ್: 6 ಟ್ರಂಕ್ ತರಲು ಸೂಚನೆ

BREAKING: ಜಪ್ತಿಯಾಗಿದ್ದ ಜಯಲಲಿತಾ ಒಡವೆ ಹಿಂತಿರುಗಿಸಲು ದಿನಾಂಕ ಫಿಕ್ಸ್: 6 ಟ್ರಂಕ್ ತರಲು ಸೂಚನೆ

ಬೆಂಗಳೂರು: ದಿ. ಜಯಲಲಿತಾ ಅವರ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಪ್ತಿಯಾದ ಜಯಲಲಿತಾ ಒಡವೆ ಹಿಂತಿರುಗಿಸಲು ಕೋರ್ಟ್ ದಿನಾಂಕ ನಿಗದಿಪಡಿಸಿದೆ.

ಮಾ. 6ರು ಮತ್ತು 7ರಂದು ಒಡವೆಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರ ಮಾಡಲಾಗುವುದು. ಒಡವೆ ಸ್ವೀಕರಿಸಲು ತಮಿಳುನಾಡಿನಿಂದ ಇಬ್ಬರು ಅಧಿಕಾರಿಗಳ ನೇಮಕ ಮಾಡಲಾಗಿದೆ. ತಮಿಳುನಾಡು ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ. ಐಜಿಪಿ ವಿಜಲೆನ್ಸ್ ಹಾಜರಿರಬೇಕು ಎಂದು ಸೂಚನೆ ನೀಡಿದೆ.

ಒಡವೆ ತೆಗೆದುಕೊಂಡು ಹೋಗಲು ಆರು ಟ್ರಂಕ್ ಗಳನ್ನು ತರುವಂತೆ ನ್ಯಾಯಾಲಯ ಸೂಚನೆ ನೀಡಿದೆ. ಜೊತೆಗೆ ವಿಡಿಯೋಗ್ರಾಫರ್, ಫೋಟೋಗ್ರಾಫರ್ ಕರೆತರಲು ತಿಳಿಸಲಾಗಿದೆ. ಎರಡು ದಿನಗಳು ಸಿಟಿ ಸಿವಿಲ್ ಕೋರ್ಟ್ ನಲ್ಲಿ ಭದ್ರತೆ ಒದಗಿಸಲು ತಿಳಿಸಲಾಗಿದೆ. ವಿಶೇಷ ನ್ಯಾಯಾಧೀಶ ಮೋಹನ್ ಅವರು ಈ ಬಗ್ಗೆ ಸೂಚನೆ ನೀಡಿದ್ದಾರೆ. ಕರ್ನಾಟಕಕ್ಕೆ ಕೊಡಬೇಕಾದ 5 ಕೋಟಿ ರೂಪಾಯಿ ವ್ಯಾಜ್ಯ ಶುಲ್ಕವನ್ನು ಇನ್ನು ಪಾವತಿಸಿಲ್ಲ ಎಂದು ನ್ಯಾಯಾಲಯಕ್ಕೆ ಎಸ್ಪಿಪಿ ಕಿರಣ್ ಜವಳಿ ಮಾಹಿತಿ ನೀಡಿದ್ದಾರೆ. ಮುಂದಿನ ವಿಚಾರಣೆಯನ್ನು ನ್ಯಾಯಾಲಯ ಮಾರ್ಚ್ 6ಕ್ಕೆ ನಿಗದಿಪಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular