HomeIndiaಮಾನನಷ್ಟ ಮೊಕದ್ದಮೆ ವಜಾಗೊಳಿಸಿದ ಕೋರ್ಟ್: ರಾಹುಲ್ ಗಾಂಧಿಗೆ ಬಿಗ್ ರಿಲೀಫ್

ಮಾನನಷ್ಟ ಮೊಕದ್ದಮೆ ವಜಾಗೊಳಿಸಿದ ಕೋರ್ಟ್: ರಾಹುಲ್ ಗಾಂಧಿಗೆ ಬಿಗ್ ರಿಲೀಫ್

ನವದೆಹಲಿ: ಲೋಕಸಭೆ ವಿಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಉತ್ತರ ಪ್ರದೇಶದ ಸುಲ್ತಾನ್‌ಪುರದ ವಿಶೇಷ ಎಂಪಿ-ಎಂಎಲ್‌ಎ ನ್ಯಾಯಾಲಯ ಬಿಗ್ ರಿಲೀಫ್ ನೀಡಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆ ಕೇಸ್ ನ್ನು ಕೋರ್ಟ್ ಖುಲಾಸೆಗೊಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2018ರ ಕರ್ನಾಟಕ ಚುನಾವಣೆ ವೇಳೆ ಆಗಿನ ಬಿಜೆಪಿ ಅಧ್ಯಕ್ಷ, ಹಾಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ನೀಡಿದ್ದರೆನ್ನಲಾದ ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿದಂತೆ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ವಿಶೇಷ ಎಂಪಿ-ಎಂಎಲ್‌ಎ ಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ನಿರಾಳರಾಗಿದ್ದಾರೆ.

ತೀರ್ಪು ಪ್ರಕಟವಾಗುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರು ಇಂದು ಸುಲ್ತಾನ್‌ಪುರ ನ್ಯಾಯಾಲಯಕ್ಕೆ ಖುದ್ದು ಹಾಜರಾಗಿದ್ದರು. ಪ್ರಕರಣದ ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರು, ದೂರಿನಲ್ಲಿ ಸೂಕ್ತ ಆಧಾರಗಳಿಲ್ಲದಿರುವುದನ್ನು ಪುಷ್ಟೀಕರಿಸಿ ಪ್ರಕರಣವನ್ನು ಸಂಪೂರ್ಣವಾಗಿ ವಜಾಗೊಳಿಸಿದ್ದಾರೆ. ಈ ಮಹತ್ವದ ತೀರ್ಪಿನಿಂದ ಕಳೆದ 8 ವರ್ಷಗಳಿಂದ ರಾಹುಲ್ ಗಾಂಧಿ ಅವರ ಮೇಲಿದ್ದ ಆರೋಪ ಮುಕ್ತವಾಗಿದೆ. ,

ಕೋರ್ಟ್ ನಲ್ಲಿ ಜಯಗಳಿಸುತ್ತಿದ್ದಂತೆ ರಾಹುಲ್ ಗಾಂಧಿ ಕೋರ್ಟ್ ಆವರಣದಿಂದ ಹೊರ ಬರುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

ಏನಿದು ಪ್ರಕರಣ ?:

2018ರ ಮೇ 8ರಂದು ಬೆಂಗಳೂರಿನಲ್ಲಿ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರದ ವೇಳೆ ರಾಹುಲ್ ಗಾಂಧಿ ಅವರು ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆಯನ್ನು ನೀಡಿದರು ಎಂದು ಆರೋಪಿಸಲಾಗಿದೆ. ಸುಲ್ತಾನ್‌ಪುರ ಜಿಲ್ಲಾ ಸಹಕಾರಿ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ವಿಜಯ್ ಮಿಶ್ರಾ ಅವರು 2018ರ ಆಗಸ್ಟ್ 4 ರಂದು ರಾಹುಲ್ ಗಾಂಧಿ ವಿರುದ್ಧ ಸುಲ್ತಾನ್‌ಪುರ ಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular