HomeKarnatakaಶಿಕ್ಷೆಯ ಭಯದಿಂದ ಜಡ್ಜ್ ಎದುರಲ್ಲೇ ವಿಷ ಸೇವಿಸಿದ ಆರೋಪಿ

ಶಿಕ್ಷೆಯ ಭಯದಿಂದ ಜಡ್ಜ್ ಎದುರಲ್ಲೇ ವಿಷ ಸೇವಿಸಿದ ಆರೋಪಿ

ದಾವಣಗೆರೆ: ಜೈಲು ಶಿಕ್ಷೆಗೊಳಗಾಗುವ ಭಯದಿಂದ ಆರೋಪಿಯೊಬ್ಬ ನ್ಯಾಯಾಲಯದಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹರಿಹರ ನ್ಯಾಯಾಲಯದಲ್ಲಿ ನಡೆದಿದೆ.

ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಫಜಲ್ ಅಲಿ(38) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಹರಿಹರದ ಎರಡನೇ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಸಂದರ್ಭದಲ್ಲಿ ನ್ಯಾಯಾಧೀಶರ ಸಮ್ಮುಖದಲ್ಲಿ ವಿಷ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದ ಆತನನ್ನು ದಾವಣಗೆರೆ ಜಿಲ್ಲಾ ಚಿಗಟೇರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಆರೋಪಿ ಮತ್ತು ಆತನ ಪತ್ನಿ ವಿಚ್ಛೇದನ ಪಡೆದಿದ್ದು, ಕೋರ್ಟ್ ಆದೇಶದಂತೆ ಪತ್ನಿಗೆ ಕೆಲವು ತಿಂಗಳಿಂದ ಜೀವನಾಂಶ ನೀಡಿರಲಿಲ್ಲ. ಪತ್ನಿಯ ಪರ ವಕೀಲರು ನ್ಯಾಯಾಧೀಶರ ಗಮನಕ್ಕೆ ಈ ವಿಚಾರ ತಂದಿದ್ದು, ಈ ಹಿನ್ನೆಲೆಯಲ್ಲಿ ಜೈಲಿಗೆ ಹಾಕುವ ಆದೇಶ ನೀಡಬಹುದೆಂಬ ಆತಂಕದಿಂದ ನ್ಯಾಯಾಲಯಕ್ಕೆ ಬರುವಾಗಲೇ ತಂದಿದ್ದ ಬಾಟಲಿಯಲ್ಲಿನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಹರಿಹರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular