ಬೆಂಗಳೂರು: ರಾಜ್ಯ ಸರ್ಕಾರಿ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ಹೊರಡಿಸಿರುವ ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಲಾಗಿದೆ.
ವಕೀಲ ಗಿರೀಶ್ ಭಾರದ್ವಾಜ್ ಅವರು ಈ ಅರ್ಜಿ ಸಲ್ಲಿಸಿದ್ದು, ರಾಷ್ಟ್ರಗೀತೆಯ ಯಾವುದೇ ಭಾಗವನ್ನು ಕಡಿತಗೊಳಿಸುವ ಅಥವಾ ಅದರ ಗಾಯನದ ವ್ಯಾಪ್ತಿಯನ್ನು ನಿರ್ಧರಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.
ಸೆ.8ರ ಆದೇಶಕ್ಕೆ ತಡೆಯಾಜ್ಞೆ ಕೋರಿಕೆ
ಸೆಪ್ಟೆಂಬರ್ 8ರಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ ತಕ್ಷಣ ತಡೆಯಾಜ್ಞೆ ನೀಡಬೇಕು ಎಂದು ಅರ್ಜಿದಾರರು ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ. ಈ ಅರ್ಜಿಯ ವಿಚಾರಣೆ ಶೀಘ್ರದಲ್ಲೇ ನಡೆಯುವ ಸಾಧ್ಯತೆ ಇದೆ. ಸರ್ಕಾರದ ಆದೇಶಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡುತ್ತದೆಯೇ ಅಥವಾ ರಿಟ್ ಅರ್ಜಿಯನ್ನು ವಜಾಗೊಳಿಸುತ್ತದೆಯೇ ಎಂಬುದು ಇದೀಗ ಕುತೂಹಲಕ್ಕೆ ಕಾರಣವಾಗಿದೆ.
‘ವಂದೇ ಮಾತರಂ’ ಗೀತೆಯ ಗಾಯನಕ್ಕೆ ಸಂಬಂಧಿಸಿದ ರಾಜ್ಯ ಸರ್ಕಾರದ ಆದೇಶದ ಕುರಿತು ಹೈಕೋರ್ಟ್ ಯಾವ ನಿಲುವು ತೆಗೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.
ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ
ಬೆಂಗಳೂರು : ಕರ್ನಾಟಕ ಆರ್ಯ ವೈಶ್ಯ ಸಮುದಾಯದ ಅಭಿವೃದ್ದಿ ನಿಗಮ (ನಿ) ವತಿಯಿಂದ 2026-27 ಸಾಲಿನಲ್ಲಿ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಬ್ಯಾಂಕುಗಳ ಸಹಯೋಗದೊಂದಿಗೆ ಆರ್ಯ ವೈಶ್ಯ ಆಹಾರ ವಾಹಿನಿ/ವಾಹಿನಿ ಯೋಜನೆ, ವಾಸವಿ ಜಲಶಕ್ತಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, CET ಹಾಗೂ NET ಕೌನ್ಸಿಲಿಂಗ್ ಮುಗಿದ ನಂತರ ) ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮಕ್ಕೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್ ಲೈನ್ : http://kacdc.karnataka.gov.in ಮೂಲಕ ಆಕ್ಟೋಬರ್ 15 ರೊಳಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ, ಜಿಲ್ಲಾ ವ್ಯವಸ್ಥಾಪಕ ಕಚೇರಿ, ಬೆಂಗಳೂರು ಉತ್ತರ ಜಿಲ್ಲೆ, ನಂ.324/62. ಸರ್ವಶೀಲಾ ಕಾಂಪ್ಲೆಕ್ಸ್, ಬಳ್ಳಾರಿ ಮೈನ್ ರೋಡ್ , ಗಂಗಾನಗರ, ಬೆಂಗಳೂರು ಅಥವಾ ದೂರವಾಣಿ: 9448451111ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ಉತ್ತರ ಜಿಲ್ಲೆ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಡುಗೊಲ್ಲ ಸಮುದಾಯ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನ
ಬೆಂಗಳೂರು : ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ದಿ ನಿಗಮ ನಿಯಮಿತ ವತಿಯಿಂದ 2026-27 ಸಾಲಿನಲ್ಲಿ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಹೊಲಿಗೆ ಯಂತ್ರ ಯೋಜನೆಯಡಿ ಕರ್ನಾಟಕ ಆರ್ಯ ವೈಶ್ಯ ಸಮುದಾಯದ ಅಭಿವೃದ್ದಿ ನಿಗಮಕ್ಕೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಆರ್ಹ ಅಭ್ಯರ್ಥಿಗಳು ಬೆಂಗಳೂರು ಒನ್ / ಕರ್ನಾಟಕ –ಒನ್ / ಅಟಲ್ –ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರಿಕ ಸೇವಾಸಿಂಧು ಪೋರ್ಟಲ್ ನಡಿ ಅರ್ಜಿಗಳನ್ನು ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ದೂರವಾಣಿ ಸಂಖ್ಯೆ 080-23156006 ಸಂಪರ್ಕಿಸಬಹುದು ಎಂದು ಬೆಂಗಳೂರು ದಕ್ಷಿಣ ಜಿಲ್ಲೆ, ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದ (ನಿ), ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

