ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಫಿ ಸಾಕ್ಷಿ ಪ್ರದೋಷ್ ವಿಡಿಯೋ ವೈರಲ್ ಮಾಡಿದವರಿಗೆ ಸಂಕಷ್ಟ ಎದುರಾಗಿದೆ.
ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿರುವ ಸೋಷಿಯಲ್ ಮೀಡಿಯಾ ಖಾತೆದಾರರು ಹಾಗೂ ಯೂಟ್ಯೂಬರ್‌ಗಳನ್ನು ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಮಾಫಿ ಸಾಕ್ಷಿ ಪ್ರದೋಷ್ ನೀಡಿದ್ದ ಹೇಳಿಕೆಯ ವಿಡಿಯೋವನ್ನು ದುರ್ಬಳಕೆ ಮಾಡಿಕೊಂಡು ಜಾಲತಾಣಗಳಲ್ಲಿ ವೈರಲ್ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರದ 59ನೇ ಸಿಸಿಹೆಚ್ ಕೋರ್ಟ್ ಆದೇಶಿಸಿದೆ.
ಪ್ರಕರಣದ ತನಿಖೆ ಹಾಗೂ ನ್ಯಾಯಾಂಗ ಪ್ರಕ್ರಿಯೆಯ ಭಾಗವಾಗಿದ್ದ ಮಾಫಿ ಸಾಕ್ಷಿ ಪ್ರದೋಷ್ ಅವರ ಹೇಳಿಕೆಯ ವಿಡಿಯೋವನ್ನು ಕೆಲವರು ಸ್ಕ್ರೀನ್ ರೆಕಾರ್ಡ್ ಮಾಡಿ ಯೂಟ್ಯೂಬ್ ಹಾಗೂ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ನ್ಯಾಯಾಲಯದ ಗೌಪ್ಯತೆಯನ್ನು ಉಲ್ಲಂಘಿಸಿ, ಈ ವಿಡಿಯೋವನ್ನು ದುರ್ಬಳಕೆ ಮಾಡಿಕೊಂಡಿರುವುದನ್ನು 59ನೇ ಸಿಸಿಹೆಚ್ ಕೋರ್ಟ್ ಗಂಭೀರವಾಗಿ ಪರಿಗಣಿಸಿದೆ.
ಸಾಕ್ಷಿಯ ಹೇಳಿಕೆಯ ವಿಡಿಯೋವನ್ನು ಶೇರ್ ಮಾಡಿದ ಹಾಗೂ ಪೋಸ್ಟ್ ಮಾಡಿದ ಸೋಷಿಯಲ್ ಮೀಡಿಯಾ ಖಾತೆಗಳು ಮತ್ತು ಯೂಟ್ಯೂಬರ್‌ಗಳ ವಿರುದ್ಧ ‘ನ್ಯಾಯಾಂಗ ನಿಂದನೆ’ ಪ್ರಕರಣ ದಾಖಲಿಸುವಂತೆ ನ್ಯಾಯಾಲಯವು ಪೊಲೀಸರಿಗೆ ಮತ್ತು ಕೋರ್ಟ್ ರಿಜಿಸ್ಟ್ರಾರ್‌ಗೆ ಸ್ಪಷ್ಟ ನಿರ್ದೇಶನ ನೀಡಿದೆ.
ಅಪಘಾತದಲ್ಲಿ ಬೆನ್ನು ಮೂಳೆ ಮುರಿದುಕೊಂಡ ಬಾಲಿವುಡ್ ನಟಿ ನುಸ್ರತ್ ಭರುಚಾ
ಮುಂಬೈ: ಬಾಲಿವುಡ್ ಖ್ಯಾತ ನಟಿ ನುಸ್ರತ್ ಭರೂಚಾ ಸಿನಿಮಾ ಚಿತ್ರೀಕರಣಕ್ಕೆ ಇಂಡೋನೇಷ್ಯಾದ ಬಾಲಿ ಪ್ರವಾಸದಲ್ಲಿದ್ದಾಗ ಅಪಘಾತಕ್ಕೀಡಾಗಿದ್ದು, ಅವರ ಬೆನ್ನು ಮೂಳೆ ಮುರಿದಿದೆ ಎಂದು ತಿಳಿದುಬಂದಿದೆ.
ನುಸ್ರತ್ ಭರೂಚಾ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಬಾಲಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆಗಾಗಿ ಅವರನ್ನು ಏರ್ ಆಂಬುಲೆನ್ಸ್ ಮೂಲಕ ಮುಂಬೈಗೆ ಸ್ಥಾಳಂತರಿಸುವ ನಿಟ್ಟಿನಲ್ಲಿ ಸಿದ್ಧತೆಗಳು ನಡೆಯುತ್ತಿವೆ.
ನುಸ್ರತ್ ಅವರು ಚಿತ್ರೀಕರಣದಲ್ಲಿದ್ದಾಗಲೇ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಅವರ ಬೆನ್ನು ಮೂಳೆಗೆ ಗಂಭೀರವಾದ ಪೆಟ್ಟಾಗಿದೆ. ಅವರ ಮುಂದಿನ ಚಿತ್ರ ಟೈಗರ್ ಶ್ರಾಫ್ ಅವರೊಂದಿಗೆ ತೆರೆ ಹಂಚಿಕೊಳ್ಳಲಿದ್ದರು. ಆದರೆ ಅಷ್ಟರಲ್ಲಿ ಅಪಘಾತದಲ್ಲಿ ಬೆನ್ನು ಮೂಳೆ ಮುರಿದುಕೊಂಡಿದ್ದಾರೆ.
ಈ ಗಾಯದ ಕಾರಣದಿಂದಾಗಿ ನಟಿ ಮುಂದಿನ ಕೆಲವು ವಾರಗಳ ಕಾಲ ವಿಶ್ರಾಂತಿ ಪಡೆಯಲಿದ್ದು, ಅವರ ಮುಂಬರುವ ಚಿತ್ರಗಳ ಚಿತ್ರೀಕರಣ ಮತ್ತು ಕೆಲಸದ ಬದ್ಧತೆಗಳಿಗೆ ತಾತ್ಕಾಲಿಕವಾಗಿ ವಿರಾಮ ನೀಡಲಾಗಿದೆ. ನುಸ್ರತ್ ಭರೂಚಾ ಅವರಿಗೆ ಅಸಲಿಗೆ ಆಗಿದ್ದೇನು? ಹೇಗೆ ಅಪಘಾತ ಸಂಭವಿಸಿತು ಎಂಬ ಬಗ್ಗೆ ಅಧಿಕೃತ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಆದರೆ ಅವರ ಬೆನ್ನಿಗೆ ತೀವ್ರ ಪೆಟ್ಟಾಗಿದೆ. ಅವರ ಬೆನ್ನುಮೂಳೆಗೆ ಗಂಭೀರ ಸ್ವರೂಪದ ಗಾಯವಾಗಿದೆ ಎಂಬ ಮಾಹಿತಿಯಷ್ಟೆ
ನುಶ್ರತ್ ಭರುಚ್ಚಾ ಬಾಲಿವುಡ್‌ನ ಜನಪ್ರಿಯ ನಟಿಯರಲ್ಲಿ ಒಬ್ಬರು. ಅವರು ‘ಪ್ಯಾರ್ ಕಾ ಪಂಚ್‌ನಾಮಾ’ ಚಿತ್ರದ ಮೂಲಕ ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಗಳಿಸಿದರು. ಅದಾದ ಬಳಿಕ ‘ಸೋನು ಕೆ ಟಿತು ಕಿ ಸ್ವೀಟಿ’, ‘ಡ್ರೀಮ್ ಗರ್ಲ್’, ‘ಛೋರಿ’, ‘ಜನ್‌ಹಿತ್ ಮೇ ಜಾರಿ’, ‘ರಾಮ್ ಸೇತು’, ‘ಅಕೇಲಿ’ ಮುಂತಾದ ವಿಭಿನ್ನ ಕಥಾಹಂದರದ ಚಿತ್ರಗಳಲ್ಲಿ ನಟಿಸಿದ್ದಾರೆ. ದಕ್ಷಿಣ ಭಾರತದ ಸಿನಿಮಾಗಳಲ್ಲೂ ಅವರು ನಟನೆ ಮಾಡಿದ್ದಾರೆ. ತೆಲುಗಿನ ‘ತಾಜ್ ಮಹಲ್’ ತಮಿಳಿನ ‘ವಾಲಿಬಾ ರಾಜಾ’ ಸಿನಿಮಾಗಳಲ್ಲಿಯೂ ಅವರು ನಟಿಸಿದ್ದಾರೆ.

