HomeLatest NewsBREAKING : ಕೋವಿಡ್ 19 ಹಗರಣ : ಕುನ್ಹಾ ಆಯೋಗದ ಅವಧಿ ಆ. 31 ರವರೆಗೆ...

BREAKING : ಕೋವಿಡ್ 19 ಹಗರಣ : ಕುನ್ಹಾ ಆಯೋಗದ ಅವಧಿ ಆ. 31 ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು : ಕೋವಿಡ್ 19 ಹಗರಣಕ್ಕೆ ಸಂಬಂಧಿಸಿದಂತೆ ಆ. 31 ರವರೆಗೆ ಕುನ್ಹಾ ಆಯೋಗದ ಅವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕೋವಿಡ್ 19 ಪ್ರಕರಣದ ತನಿಖೆಗಾಗಿ ಈ ಹಿಂದೆ ರಾಜ್ಯ ಸರ್ಕಾರ ನಿವೃತ್ತ ನ್ಯಾ.ಜಾನ್ ಮೈಕಲ್ ಕುನ್ಹಾ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚನೆ ಮಾಡಿತ್ತು. ಆಯೋಗದ ಅವಧಿ ಮಾ.21 2025 ರಂದು ಕೊನೆಗೊಂಡಿತ್ತು,ನಂತರ ವಿಚಾರಣಾ ಆಯೋಗದ ಅವಧಿಯನ್ನು ಏ.1 ರಿಂದ ಜೂನ್ 20 ರವರೆಗೆ ವಿಸ್ತರಿಸಿತ್ತು. ಇದೀಗ ಮತ್ತೆ ಕುನ್ಹಾ ಆಯೋಗದ ಅವಧಿ ಆ. 31 ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಆಯೋಗವನ್ನು ಆಗಸ್ಟ್ 25, 2023 ರಂದು ರಚಿಸಲಾಗಿತ್ತು. ಪ್ರಕರಣ ಸಂಬಂಧ 3 ತಿಂಗಳಲ್ಲಿ ವರದಿ ಸಲ್ಲಿಸಬೇಕಿತ್ತು. ಆದರೆ, ಮೊದಲ ಮಧ್ಯಂತರ ವರದಿಯನ್ನು ಆಗಸ್ಟ್ 31, 2024 ರಂದು ಸಲ್ಲಿಸಿತು. ಬಳಿಕ ಆಯೋಗದ ಅವಧಿಯನ್ನು ಮಾರ್ಚ್ 31, 2025 ರವರೆಗೆ ವಿಸ್ತರಿಸಲಾಯಿತು. ನಂತರ ಮತ್ತೆ ಮೂರು ತಿಂಗಳಿಗೆ ಅವಧಿಯನ್ನು ವಿಸ್ತರಣೆ ಮಾಡಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular