HomeIndiaCovid-19 UPDATE : ಭಾರತದಲ್ಲಿ ಮತ್ತೆ ಕೊರೊನಾ ಅಬ್ಬರ : 24 ಗಂಟೆಗಳಲ್ಲಿ...

Covid-19 UPDATE : ಭಾರತದಲ್ಲಿ ಮತ್ತೆ ಕೊರೊನಾ ಅಬ್ಬರ : 24 ಗಂಟೆಗಳಲ್ಲಿ 640 ಮಂದಿಗೆ ಸೋಂಕು!

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 640 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ.

ಈ ಕುರಿತು ಕೇಂದ್ರ ಆರೋಗ್ಯ ಸಚಿವಾಲಯ ಮಾಃಇತಿ ನೀಡಿದ್ದು, ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 640 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 2,997 ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೇಶದಲ್ಲಿ ಒಟ್ಟು ಕೊರೊನಾ ಸೋಂಕು ಪ್ರಕರಣಗಳ ಪೈಕಿ ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.81 ರಷ್ಟಿದೆ. ಮರಣ ಪ್ರಮಾಣ ಶೇ 1.19 ರಷ್ಟಿದೆ. ದೇಶದಲ್ಲಿ ಇದುವರೆಗೆ 220.67 ಕೋಟಿ ಕೋವಿಡ್ ಲಸಿಕಾ ಡೋಸ್‌ ಗಳನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

For Latest News Updates, Join Our Whatsapp Community🚩
RELATED ARTICLES

Most Popular