HomeIndiaBREAKING NEWS: ಒಂದೇ ದಿನದಲ್ಲಿ 761 ಜನರಲ್ಲಿ ಕೊರೊನಾ ಸೋಂಕು; ಮಹಾಮಾರಿಗೆ 12 ಜನ ಬಲಿ

BREAKING NEWS: ಒಂದೇ ದಿನದಲ್ಲಿ 761 ಜನರಲ್ಲಿ ಕೊರೊನಾ ಸೋಂಕು; ಮಹಾಮಾರಿಗೆ 12 ಜನ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 761 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಒಂದೇ ದಿನದಲ್ಲಿ 761 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, 12 ಜನರು ಮಹಾಮಾರಿ ಅಟ್ಟಹಾಸಕ್ಕೆ ಬಲಿಯಾಗಿದ್ದಾರೆ. ದೇಶದಲ್ಲಿ 4,334 ಕೋವಿಡ್ ಸಕ್ರಿಯ ಪ್ರಕರಣಗಳು ದಾಖಲಾಗಿವೆ.

ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ 44478885 ಜನರು ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 533385 ಜನರು ಮಹಾಮಾರಿಗೆ ಸಾವನ್ನಪ್ಪಿದ್ದಾರೆ. 220,67,79,081 ಜನರಿಗೆ ವ್ಯಾಕ್ಸಿನ್ ಹಾಕಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular