ಬೆಂಗಳೂರು: ರಾಜ್ಯದಲ್ಲಿ ಮಳೆ ಅಬ್ಬರದ ನಡುವೆ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅದರಲ್ಲಿಯೂ ರಾಜಧಾನಿ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ.
ಬೆಂಗಳೂರಿನ ಮತ್ತೋರ್ವ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಗಾಂಧಿನಗರದ 46 ವರ್ಷದ ವ್ಯಕ್ತಿಯಲ್ಲಿ ಕೋವಿಡ್ ಪಾಸಿಟಿವ್ ಬಂದಿದೆ. ಇವರಿಗೂ ಕೂಡ ಯಾವುದೇ ಟ್ರಾವೆಲ್ ಹಿಸ್ಟ್ರಿ ಇರಲಿಲ್ಲ. ಆದಾಗ್ಯೂ ಸೋಂಕು ಪತ್ತೆಯಾಗಿದೆ.
ಸೋಂಕಿತ ವ್ಯಕ್ತಿಯನ್ನು ಹೋಂ ಐಸೋಲೇಷನ್ ನಲ್ಲಿ ಇಡಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ರಾಜ್ಯದಲ್ಲಿ ಈಗಾಗಲೇ ಕೋವಿಡ್ ಟೆಸ್ಟಿಂಗ್ ಆರಂಭಿಸಲಾಗಿದೆ. ಈವರೆಗೆ ರಾಜ್ಯದಲ್ಲಿ 71ಕ್ಕೂ ಹೆಚ್ಚು ಜನರಲ್ಲಿ ಕೋವಿಡ್ ಪತ್ತೆಯಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.