HomeIndiaBIG NEWS: 24 ಗಂಟೆಯಲ್ಲಿ 475 ಜನರಲ್ಲಿ ಕೊರೊನಾ ಸೋಂಕು ಹೊಸದಾಗಿ ಪತ್ತೆ; ಸಕ್ರಿಯ ಪ್ರಕರಣಗಳ...

BIG NEWS: 24 ಗಂಟೆಯಲ್ಲಿ 475 ಜನರಲ್ಲಿ ಕೊರೊನಾ ಸೋಂಕು ಹೊಸದಾಗಿ ಪತ್ತೆ; ಸಕ್ರಿಯ ಪ್ರಕರಣಗಳ ಸಂಖ್ಯೆ ಕೊಂಚ ಕುಸಿತ

ನವದೆಹಲಿ: ಕೋವಿಡ್ ರೂಪಾಂತರ ವೈರಸ್ JN.1 ಆತಂಕದ ನಡುವೆ ದೇಶದಲ್ಲಿ 475 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ಕಳೆದ 24 ಗಂಟೆಯಲ್ಲಿ 475 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, 6 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. 3,919 ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ. ಕೆಲ ದಿನಗಳಿಗೆ ಹೋಲಿಸಿದರೆ ಸಕ್ರಿಯ ಪ್ರಕರಣಗಳ ಸಂಖ್ಯೆ ಕೊಂಚ ಕುಸಿತ ಕಂಡಂತಾಗಿದೆ.

ಇನ್ನು ದೇಶದಲ್ಲಿ 44481893 ಜನರು ಕೋವಿಡ್ ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 533402 ಜನರು ಈವರೆಗೆ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ 220,67,81,859 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular