HomeLatest NewsBREAKING: ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಕೊರೊನಾ ಮಾಹಾಮಾರಿ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 47ಕ್ಕೆ ಏರಿಕೆ

BREAKING: ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಕೊರೊನಾ ಮಾಹಾಮಾರಿ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 47ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರದ ನಡುವೆ ಮಹಾಮಾರಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 47ಕ್ಕೆ ಏರಿಕೆಯಾಗಿದೆ.

ಎರಡು ದಿನಗಳ ಹಿಂದಷ್ಟೇ 32 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಇಂದು ಕೊರೊನಾ ಸೋಂಕಿತರ ಸಂಖ್ಯೆ 47ಕ್ಕೆ ಏರಿಕೆಯಾಗಿದೆ. ಅದರಲ್ಲಿ ಬೆಂಗಳೂರಿನಲ್ಲಿಯೇ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ರಾಜ್ಯದಲ್ಲಿ ಪತ್ತೆಯಾದ 47 ಪ್ರಕರಣಗಳಲ್ಲಿ 40 ಪ್ರಕರಣಗಳು ಬೆಂಗಳೂರಿನಲ್ಲಿಯೇ ದೃಢಪಟ್ಟಿವೆ.

ಈಗಾಗಲೇ ರಾಜ್ಯದ 8 ಮೆಡಿಕಲ್ ಕಾಲೇಜುಗಳಲ್ಲಿ ಕೋವಿಡ್ ಟೆಸ್ಟ್ ಆರಂಭವಾಗಿದೆ. ಜ್ವರ, ಕೆಮ್ಮು, ನೆಗಡಿ, ಉಸಿರಾಟದ ಸಮಸ್ಯೆ, ಸಾರಿ ರೋಗ ಲಕ್ಷಣಗಳು ಕಂಡುಬಂದರೆ ತಕ್ಷಣ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular