BIG NEWS: ಕೋವಿಡ್ ಹೆಚ್ಚಳ; ಕರುನಾಡಿನಲ್ಲಿಯೂ ಆರೋಗ್ಯ ಇಲಾಖೆಯಿಂದ ಕಟ್ಟೆಚ್ಚರ

ಬೆಂಗಳೂರು: ದೇಶಾದ್ಯಂತ ಕೋವಿಡ್ ಪ್ರಕರಣ ಹೆಚ್ಚುತ್ತಿದ್ದು, ಅದರಲ್ಲಿಯೂ ಕೇರಳದಲ್ಲಿ ಮಹಾಮಾರಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ರಾಜ್ಯದಲ್ಲಿಯೂ ಕಟೆಚ್ಚರ ಕೈಗೊಳ್ಳಲಾಗಿದೆ.

ಕೇರಳದಲ್ಲಿ ಕೋವಿಡ್ ಉಪತಳಿ JN.1 ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯು ಆತಂಕ ಎದುರಾಗಿದ್ದು, ಗಡಿ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ. ಮಂಗಳೂರು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ.

ಪ್ರತಿನಿತ್ಯ ಕೇರಳದಿಂದ ರಾಜ್ಯಕ್ಕೆ ಬಂದು ಹೋಗುವವರ ಸಂಖ್ಯೆ ಹೆಚ್ಚಿರುವುದರಿಂದ ರಾಜ್ಯದಲ್ಲಿಯೂ ಕೋವಿಡ್ ಭೀತಿ ಎದುರಾಗಿದೆ. ಕೋವಿಡ್ ನಿಯಂತ್ರಣಕ್ಕೆ ಆಸ್ಪತ್ರೆಗಳಲ್ಲಿ ಮಾಕ್ ಡ್ರಿಲ್ ನಡೆಸಲು ಆರೋಗ್ಯ ಇಲಾಖೆ ಸೂಚಿಸಿದೆ.

ಆಸ್ಪತ್ರೆಗಳಲ್ಲಿ ಆರೋಗ್ಯ ಸಲಕರಣೆಗಳು, ಹಾಸಿಗೆ, ವೈದ್ಯರು, ಅರೆ ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಮಾನವ ಸಂಪನ್ಮೂಲಗಳು ಲಭ್ಯವಿರುವಂತೆ ನೋಡಿಕೊಳ್ಳಲು ಸೂಚಿಸಿದೆ.

ತಾಂತ್ರಿಕ ಹಾಗೂ ಆಕ್ಸಿಜನ್ ಸೌಲಭ್ಯಗಳೊಂದಿಗೆ ಆಂಬುಲೆನ್ಸ್ ಸೇವೆ, ಕೋವಿಡ್ ಟೆಸ್ಟ್ ಸಾಮರ್ಥ್ಯ ಹಾಗೂ ವೈದ್ಯಕೀಯ ಆಮ್ಲಜನಕದ ಲಭ್ಯತೆ ಪರಿಶೀಲಿಸುವಂತೆ ಸೂಚಿಸಲಾಗಿದೆ.

ಮಂಗಳೂರು, ಮೈಸೂರು, ಚಾಮರಾಜನಗರ ಗಡಿ ಜಿಲ್ಲೆಗಳಲ್ಲಿ ಚೆಕ್ ಪೋಸ್ಟ್ ತೆರೆದು ತಪಾಸಣೆ ನಡೆಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read