HomeIndiaBIG NEWS: ದೇಶಾದ್ಯಂತ ಮತ್ತೆ ಆತಂಕ ಸೃಷ್ಟಿಸಿದ ಕೋವಿಡ್; ಮಹಾಮಾರಿಗೆ ಐವರು ಬಲಿ; ಒಂದೇ ದಿನದಲ್ಲಿ...

BIG NEWS: ದೇಶಾದ್ಯಂತ ಮತ್ತೆ ಆತಂಕ ಸೃಷ್ಟಿಸಿದ ಕೋವಿಡ್; ಮಹಾಮಾರಿಗೆ ಐವರು ಬಲಿ; ಒಂದೇ ದಿನದಲ್ಲಿ 335 ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶಾದ್ಯಂತ ಮಹಾಮಾರಿ ಕೊರೊನಾ ಸೋಂಕು ಮತ್ತೆ ಹೆಚ್ಚುತ್ತಿದೆ. ಒಂದೇ ದಿನದಲ್ಲಿ 335 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ಕೊರೊನಾ ಸೋಂಕು ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, 335 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಕೋವಿಡ್ ಸಕ್ರಿಯ ಪ್ರಕರಣ 1701ಕ್ಕೆ ಏರಿಕೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಒಂದೇ ದಿನದಲ್ಲಿ ದೇಶದಲ್ಲಿ 5 ಜನರು ಕೋವಿಡ್ ಗೆ ಬಲಿಯಾಗಿದ್ದಾರೆ. ಕೇರಳ, ಉತ್ತರ ಪ್ರದೇಶಸೇರಿದಂತೆ ಕೋವಿಡ್ ಗೆ ಐವರು ಸಾವನ್ನಪ್ಪಿದ್ದಾರೆ. ಕೇರಳದಲ್ಲಿ ಕೊರೊನಾ ಹೊಸತಳಿ JN.1 ಸೋಂಕು ವ್ಯಾಪಕವಾಗಿ ಹರಡುತ್ತಿದೆ.

ದೇಶದಲ್ಲಿ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4.46 ಕೋಟಿಗೆ (4,44,69,799) ಏರಿಕೆಯಾಗಿದೆ. ರಾಷ್ಟ್ರೀಯ ಚೇತರಿಕೆ ದರವನ್ನು 98.81 ಪ್ರತಿಶತಕ್ಕೆ ನಿಗದಿಪಡಿಸಲಾಗಿದೆ. ಇಲ್ಲಿಯವರೆಗೆ, ಕೋವಿಡ್ -19 ನಿಂದ 5,33,316 ಜನರು ಸಾವನ್ನಪ್ಪಿದ್ದಾರೆ ಮತ್ತು ಪ್ರಕರಣದ ಸಾವಿನ ಪ್ರಮಾಣವು ಶೇಕಡಾ 1.19 ರಷ್ಟಿದೆ ಎಂದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular