HomeIndiaBIG NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 142 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.

ಕಳೆದ 24 ಗಂಟೆಯಲ್ಲಿ ಕೋವಿಡ್ ಗೆ ಮೂವರು ಬಲಿಯಾಗಿದ್ದಾರೆ. ಆದರೆ ದೇಶದಲ್ಲಿ ಈವರೆಗೆ 5,30,761 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 1,916 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,52,360 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ 01,126 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,63,40,003 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 42,613 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular