HomeLatest Newsಕೋವಿಡ್ ಹಗರಣ ತನಿಖೆ: ಆ. 31ರವರೆಗೆ ನ್ಯಾ. ಮೈಕಲ್ ಡಿ. ಕುನ್ಹಾ ಆಯೋಗ ಅವಧಿ ವಿಸ್ತರಣೆ:...

ಕೋವಿಡ್ ಹಗರಣ ತನಿಖೆ: ಆ. 31ರವರೆಗೆ ನ್ಯಾ. ಮೈಕಲ್ ಡಿ. ಕುನ್ಹಾ ಆಯೋಗ ಅವಧಿ ವಿಸ್ತರಣೆ: ಸರ್ಕಾರ ಆದೇಶ

ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ನಡೆದಿದೆ ಎನ್ನಲಾದ ಹಗರಣದ ತನಿಖೆ ಸಂಬಂಧ ರಚಿಸಲಾಗಿದ್ದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿ. ಕುನ್ಹಾ ನೇತೃತ್ವದ ಆಯೋಗದ ಅವಧಿಯನ್ನು ಆಗಸ್ಟ್ 31ರವರೆಗೆ ವಿಸ್ತರಿಸಿ ಗೃಹ ಇಲಾಖೆ ಆದೇಶ ಹೊರಡಿಸಿದೆ.

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಇತ್ತೀಚೆಗೆ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ನ್ಯಾಯಮೂರ್ತಿ ಮೈಕಲ್ ಡಿ. ಕುನ್ಹಾ ನೇತೃತ್ವದ ಏಕ ಸದಸ್ಯ ಆಯೋಗವನ್ನು ಸರ್ಕಾರ ರಚಿಸಿದ್ದು, ಒಂದು ತಿಂಗಳೊಳಗೆ ವರದಿ ಸಲ್ಲಿಸುವಂತೆ ಸೂಚಿಸಿದೆ. ಈ ವರದಿಯನ್ನು ತುರ್ತಾಗಿ ಸಲ್ಲಿಸಬೇಕಿರುವ ಹಿನ್ನೆಲೆಯಲ್ಲಿ ಕೋವಿರ್ ಕಾರಣದ ತನಿಖಾ ಅವಧಿಯನ್ನು ಜುಲೈ 31 ರಿಂದ ಒಂದು ತಿಂಗಳ ಅವಧಿಗೆ ವಿಸ್ತರಿಸಲಾಗಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular