HomeKarnatakaBIG NEWS: ಕೋವಿಡ್ ನಡುವೆ ವೈರಲ್ ಫೀವರ್ ಆತಂಕ; ಒಂದೇ ಶಾಲೆಯ 15 ಮಕ್ಕಳು ಅನಾರೋಗ್ಯ

BIG NEWS: ಕೋವಿಡ್ ನಡುವೆ ವೈರಲ್ ಫೀವರ್ ಆತಂಕ; ಒಂದೇ ಶಾಲೆಯ 15 ಮಕ್ಕಳು ಅನಾರೋಗ್ಯ

ಚಾಮರಾಜನಗರ: ಮಹಾಮಾರಿ ಕೊರೊನಾ ಸೋಂಕು ಹೆಚ್ಚುತ್ತಿರುವ ನಡುವೆಯೇ ರಾಜ್ಯದಲ್ಲಿ ಮತ್ತೊಂದು ಆತಂಕ ಶುವಾಗಿದೆ. ಮಕ್ಕಳಲ್ಲಿ ವೈರಲ್ ಫೀವರ್ ಕಾಣಿಸಿಕೊಳ್ಳುತ್ತಿದ್ದು, ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ.

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಳೇಪೇಟೆ ಸರ್ಕಾರಿ ಶಾಲೆಯಲ್ಲಿ ಒಂದೇ ದಿನ 15 ಮಕ್ಕಳಲ್ಲಿ ವೈರಲ್ ಫೀವರ್ ಕಾಣಿಸಿಕೊಂಡಿದ್ದು, ಮಕ್ಕಳು ಅಸ್ವಸ್ಥರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

61 ವಿದ್ಯಾರ್ಥಿಗಳಿದ್ದ ಶಾಲೆಯಲ್ಲಿ ಈಗ 15 ಮಕ್ಕಳಲ್ಲಿ ವೈರಲ್ ಫೀವರ್ ಕಾಣಿಸಿಕೊಂಡಿದ್ದು, ಶಾಲೆಗೆ ಗೈರಾಗಿದ್ದಾರೆ. ಮಕ್ಕಳಲ್ಲಿ ಶೀತ, ಕೆಮ್ಮು, ಜ್ವರ ಕಣಿಸಿಕೊಂಡಲ್ಲಿ ಶಾಲೆಗಳಿಗೆ ಕಳುಹಿಸದಂತೆ ಆರೋಗ್ಯ ಸಚಿವರು ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಇದೀಗ ಹಲವು ಶಾಲೆಗಳಲ್ಲಿ ಮಕ್ಕಳು ಶಾಲೆಗೆ ಗೈರಾಗುತ್ತಿದ್ದಾರೆ. ಕೋವಿಡ್ ಆತಂಕದ ನಡುವೆಯೇ ಮಕ್ಕಳಲ್ಲಿ ವೈರಲ್ ಫೀವರ್ ಕಾಣಿಸಿಕೊಳ್ಳುತ್ತಿದೆ.

 

For Latest News Updates, Join Our Whatsapp Community🚩
RELATED ARTICLES

Most Popular