HomeKarnatakaBREAKING NEWS: ಹಸುಗಳ ಕೆಚ್ಚಲು ಕೊಯ್ದ ಘಟನೆ: ದುಷ್ಕರ್ಮಿಗಳ ವಿರುದ್ಧ FIR ದಾಖಲು

BREAKING NEWS: ಹಸುಗಳ ಕೆಚ್ಚಲು ಕೊಯ್ದ ಘಟನೆ: ದುಷ್ಕರ್ಮಿಗಳ ವಿರುದ್ಧ FIR ದಾಖಲು

ಬೆಂಗಳೂರು: ಮೂರು ಹಸುಗಳ ಕೆಚ್ಚಲನ್ನು ಕೊಯ್ದ ದುಷ್ಕರ್ಮಿಗಳ ವಿರುದ್ಧ ಬೆಂಗಳೂರಿನ ಕಾಟನ್ ಪೇಟೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ರಸ್ತೆಯಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲನ್ನೆ ಕೊಯ್ದು ಕಿಡಿಗೇಡಿಗಳು ವಿಕೃತಿ ಮೆರೆದಿದ್ದರು. ಕೃತ್ಯದ ಬಗ್ಗೆ ರಾಜ್ಯಾದ್ಯಂತ ತೀವ್ರ ಖಂಡನೆ ವ್ಯಕ್ತವಾಗಿದೆ. ಈ ನಡುವೆ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಕಿಡಿಗೇಡಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಪ್ರಾಣಿಹಿಂಸಾ ತಡೆ ಕಾಯ್ದೆಯಡಿ ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗಳ ಪತ್ತೆಗಾಗಿ ಹುಡುಕಾಟ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular