ನವದೆಹಲಿ : ಭಾರತದ ಉಪರಾಷ್ಟ್ರಪತಿಯಾಗಿ ಇಂದು ಸಿ.ಪಿ ರಾಧಾಕೃಷ್ಣನ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.
ರಾಷ್ಟ್ರಪತಿ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಸಮಾರಂಭದಲ್ಲಿ ಮಹಾರಾಷ್ಟ್ರದ ಮಾಜಿ ರಾಜ್ಯಪಾಲ ರಾಧಾಕೃಷ್ಣನ್ ಅವರು ಮುಂದಿನ ಉಪರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಸಂಸದ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಸ್ತುತ ಗುಜರಾತ್ ಪ್ರವಾಸದಲ್ಲಿರುವುದರಿಂದ ಪ್ರಮಾಣವಚನ ಸಮಾರಂಭಕ್ಕೆ ಹಾಜರಾಗುವ ಸಾಧ್ಯತೆ ಕಡಿಮೆ ಎಂದು ಮೂಲಗಳು ತಿಳಿಸಿವೆ. ರಾಹುಲ್ ಗಾಂಧಿ ಅನುಪಸ್ಥಿತಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
NDA ಯ ಸಿಪಿ ರಾಧಾಕೃಷ್ಣನ್ ಅವರನ್ನು ಭಾರತದ ಮುಂದಿನ ಉಪರಾಷ್ಟ್ರಪತಿ ಎಂದು ಘೋಷಿಸಲಾಗಿದೆ. ಈ ಚುನಾವಣೆಯಲ್ಲಿ 427 ಶಾಸಕರು ರಾಧಾಕೃಷ್ಣನ್ಗೆ ಮತ ಹಾಕಿದರು, ಜಗದೀಪ್ ಧಂಖರ್ ಅವರ ಹಠಾತ್ ರಾಜೀನಾಮೆಯಿಂದಾಗಿ ಈ ಬೆಳವಣಿಗೆ ನಡೆದಿದೆ.
ಎರಡನೇ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಗಿಂತ ಹೆಚ್ಚಿನ ಸಂಖ್ಯೆಯಲ್ಲಿ 452 ಮತಗಳನ್ನು ಗಳಿಸುವ ಮೂಲಕ ಎನ್ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಬುಧವಾರ ಉಪರಾಷ್ಟ್ರಪತಿಯಾಗಿ ಆಯ್ಕೆ ಆದರು.