MLC Yogeshwar : ಹೊಂದಾಣಿಕೆ ರಾಜಕಾರಣದ ಬಗ್ಗೆ ಹೊಸ ಬಾಂಬ್ ಸಿಡಿಸಿದ ಸಿ.ಪಿ ಯೋಗೇಶ್ವರ್

ಬೆಂಗಳೂರು : ಹೊಂದಾಣಿಕೆ ರಾಜಕಾರಣದ ಬಗ್ಗೆ ಎಮ್ ಎಲ್ ಸಿ ಸಿ.ಪಿ ಯೋಗೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು ಹಿರಿಯ ನಾಯಕರು ಹೊಂದಾಣಿಕೆ ಮಾಡಿಕೊಂಡಿರುವುದು ನಿಜ ಸಿಪಿ ಯೋಗೇಶ್ವರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಹೊಂದಾಣಿಕೆ ಬಗ್ಗೆ ಈಗ ಮಾತನಾಡಿದ್ರೆ ನಾವು ಬೆಂಕಿ ಹಚ್ಚಿದಂತೆ. ಹಿರಿಯ ನಾಯಕರು ಹೊಂದಾಣಿಕೆ ಮಾಡಿಕೊಂಡಿರುವುದು ನಿಜ. ಮಂತ್ರಿ ಮಂಡಲ ವಿಸ್ತರಣೆ ಮಾಡದಿರುವುದು ಸೋಲಿಗೆ ಕಾರಣ ಎಂದು ಸಿ ಸಿ.ಪಿ ಯೋಗೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ  ವಿಚಾರದ ಬಗ್ಗೆ ಬಿಜೆಪಿ ಎಂಎಲ್ ಸಿ ಸಿ.ಪಿ. ಯೋಗೇಶ್ವರ್(BJP MLC C.P. Yogeshwar) ಮಹತ್ವದ ಹೇಳಿಕೆ ನೀಡಿದ್ದು, ಮೈತ್ರಿ ವಿಚಾರದ ಬಗ್ಗೆ ಪಕ್ಷ ತೀರ್ಮಾನ ಮಾಡಲಿದೆ ಎಂದಿದ್ದಾರೆ. ಲೋಕಸಭೆ ಚುಣಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ನಾನು ಮಾತನಾಡುವುದಿಲ್ಲ. ನಮ್ಮ ಪಕ್ಷ ತೀರ್ಮಾನ ಕೈಗೊಳ್ಳುತ್ತದೆ. ವಿಧಾನಸಭೆ ಚುನಾವಣೆಯಲ್ಲಿ ಹೊಂದಾಣಿಕೆ ಎಂಬುದು ಮುಗಿದಕಥೆ. ಹೊಂದಾಣಿ ಬಗ್ಗೆನಾನು ಮಾತನಾಡಿದ್ರೆ ಬೆಂಕಿ ಹಚ್ಚಿದಂತಾಗುತ್ತದೆ ಎಂದರು.
ವಿಧಾನಸಭೆ ಚುನಾವಣೆಯಲ್ಲಿ ಹಿರಿಯ ನಾಯಕರು ಹೊಂದಾಣಿಕೆ ಮಾಡಿಕೊಂಡಿರುವುದು ನಿಜ. ನನಗೂ ವೈಯಕ್ತಿವಾಗಿ ನಿಜ ಅನಿಸಿದೆ. ಮಂತ್ರಿಮಂಡಲ ವಿಸ್ತರಣೆ ಮಾಡದಿರುವುದ ಬಿಜೆಪಿ ಸೋಲಿಗೆ ಕಾರಣ. ಕಾಂಗ್ರೆಸ್ ಸುಳ್ಳು ಆರೋಪಗಳಿಗೆ ಟಕ್ಕರ್ ಕೊಡಲು ಆಗಲಿಲ್ಲ. ಜೆಡಿಎಸ್, ಬಿಜೆಪಿ ಹೋರಾಟದಿಂದ 3 ನೇಯವರಿಗೆ ಲಾಭವಾಗಿದೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read