ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಿಂದ ಚನ್ನಪಟ್ಟಣದಲ್ಲಿ ಪಕ್ಷದ ಬಲ ಹೆಚ್ಚಾಗಿದೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಸಿ.ಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಿಂದ ಚನ್ನಪಟ್ಟಣದಲ್ಲಿ ಪಕ್ಷದ ಬಲ ಹೆಚ್ಚಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಚನ್ನಪಟ್ಟಣದ ಹಿರಿಯ ನಾಯಕ ಸಿ.ಪಿ. ಯೋಗೇಶ್ವರ್ ಅವರು ಇಂದು ನನ್ನನ್ನು ಭೇಟಿಯಾಗಿ, ಪಕ್ಷ ಸೇರ್ಪಡೆಯ ಕುರಿತು ಮಾತುಕತೆ ನಡೆಸಿದರು. ಕಾಂಗ್ರೆಸ್ ಪಕ್ಷದ ಮೂಲಕ ರಾಜಕೀಯ ಜೀವನ ಆರಂಭಿಸಿದ್ದ ಯೋಗೇಶ್ವರ್ ಅವರು ಮರಳಿ ನಮ್ಮ ಜೊತೆಗೂಡಿರುವುದು ಚನ್ನಪಟ್ಟಣದಲ್ಲಿ ಪಕ್ಷದ ಬಲವನ್ನು ಹೆಚ್ಚಿಸಿದೆ. ಅವರ ಮುಂದಿನ ರಾಜಕೀಯ ಹೋರಾಟಗಳಿಗೆ ಜೊತೆ ನಿಲ್ಲುವುದಾಗಿ ಸಿಎಂ ತಿಳಿಸಿದರು.

ಪ್ರಿಯಾಂಕಾ ಗಾಂಧಿ ಅವರು ಭರ್ಜರಿ ಬಹುಮತದಿಂದ ವಯನಾಡು ಕ್ಷೇತ್ರದಲ್ಲಿ ಜಯಗಳಿಸುವುದು ಶತಸಿದ್ಧ. ನಮ್ಮ ಸೈದ್ಧಾಂತಿಕ ವಿರೋಧಿ. ಬಿಜೆಪಿ ಸೋಲಿಸಲು ಎಲ್ಲಾ ಜಾತ್ಯತೀತ ಶಕ್ತಿ ಮತ್ತು ಮೌಲ್ಯಗಳೊಂದಿಗೆ ನಾವು ಜೊತೆ ಸೇರುತ್ತೇವೆ. ಬಿಜೆಪಿ ಸೋಲಿಸಿ ದೇಶ ಉಳಿಸುವುದು ನಮ್ಮ ಮೊದಲ ಗುರಿ. ವಯನಾಡಿನಲ್ಲಿ ರಾಹುಲ್ ಗಾಂಧಿ ಅವರು ಆರಂಭಿಸಿದ ಅಭಿವೃದ್ಧಿ ಕಾರ್ಯಗಳನ್ನು ಮುನ್ನಡೆಸಿಕೊಂಡು ಹೋಗಲು ಪ್ರಿಯಾಂಕಾ ಗಾಂಧಿ ಅತ್ಯಂತ ಸಮರ್ಥರಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read