HomeUncategorizedBIG NEWS: ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ: CPI, ಹೆಡ್ ಕಾನ್ಸ್ ಟೇಬಲ್ ಸಸ್ಪೆಂಡ್

BIG NEWS: ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ: CPI, ಹೆಡ್ ಕಾನ್ಸ್ ಟೇಬಲ್ ಸಸ್ಪೆಂಡ್

ಹಾವೇರಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಸರ್ಕಾರಿ ಉರ್ದು ಶಾಲೆಯ ಶಿಕ್ಷಕನನ್ನು ಥಳಿಸಿದ್ದ ಸಾರ್ವಜನಿಕರು, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದ ಘಟನೆ ಹಾವೇರಿ ಜಿಲ್ಲೆಯ ಸವಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿತ್ತು.

ಶಿಕ್ಷಕ ಜಗದೀಶ್ ವಿರುದ್ಧ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪ ಕೇಳಿಬಂದಿತ್ತು. ವಿಷಯ ತಿಳಿದು ಶಾಲೆಗೆ ನುಗ್ಗಿದ್ದ ಪೋಷಕರು, ಸಾರ್ವಜನಿಕರು, ಶಿಕ್ಷಕನನ್ನು ಹಿಗ್ಗಾಮುಗ್ಗಾ ಥಳಿಸಿ, ಚಪ್ಪಲಿ ಹಾರಹಾಕಿ ರಸ್ತೆಯಲ್ಲಿ ಮೆರವಣಿಗೆ ಮಾಡಿದ್ದರು. ಈ ಪ್ರಕರಣ ಸಂಬಂಧ ಸವಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದೀಗ ಈ ಪ್ರಕರಣ ಸಂಬಂಧ ಸವಣೂರು ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಹಾಗೂ ಕಾನ್ಸ್ ಟೇಬಲ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಇನ್ಸ್ ಪೆಕ್ಟರ್ ಎಸ್.ದೇವಾನಂದ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಸ್ ಪಿ ಯಶೋಧಾ ವಂಟಗೋಡಿ ಸಲ್ಲಿಸಿದ್ದ ವರದಿ ಆಧರಿಸಿ ಐಜಿಪಿ ರವಿಕಾಂತೇಗೌಡ ಅಮಾನತು ಆದೇಶ ಹೊರಡಿಸಿದ್ದಾರೆ. ಪ್ರಕರಣದಲ್ಲಿ ಹೆಡ್ ಕಾನ್ಸ್ ಟೇಬಲ್ ಮಲ್ಲಿಕಾರ್ಜುನ ಅವರನ್ನೂ ಸಸ್ಪೆಂಡ್ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular