HomeKarnatakaರಾಜ್ಯದ ಶಾಲಾ ಪಠ್ಯಕ್ರಮದಲ್ಲಿ `CPR’ ತರಬೇತಿ ಕಡ್ಡಾಯ : ಗೃಹ ಸಚಿವ ಡಾ.ಜಿ.ಪರಮೇಶ್ವರ್

ರಾಜ್ಯದ ಶಾಲಾ ಪಠ್ಯಕ್ರಮದಲ್ಲಿ `CPR’ ತರಬೇತಿ ಕಡ್ಡಾಯ : ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು : ರಾಜ್ಯದ ಶಾಲಾ ಪಠ್ಯಕ್ರಮದಲ್ಲಿ ಕಾರ್ಡಿಯೋ ಪಲ್ಮನರಿ ರೆಸಸಿಟೇಶನ್ (ಸಿಪಿಆರ್ ) ತರಬೇತಿ ವಿಷಯ ಕಡ್ಡಾಯಗೊಳಿಸಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಹೃದಯಾಘಾತದ ಸಂದರ್ಭದಲ್ಲಿ ಜೀವ ಉಳಿಸಲು ಸಿಪಿಆರ್ ಪೂರಕವಾಗಿದ್ದು, ಈ ನಿಟ್ಟಿನಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಸರ್ಕಾರಿ ನೌಕರರಿಗೆ ಕಡ್ಡಾಯವಾಗಿ ಸಿಪಿಆರ್ ತರಬೇತಿ ನೀಡಲು ಸರ್ಕಾರ ನಿರ್ಧರಿಸಿದೆ. ರಾಜ್ಯದಲ್ಲಿ 12 ಪೊಲೀಸ್ ತರಬೇತಿ ಶಾಲೆಗಳಲ್ಲಿ ಸಿಬ್ಬಂದಿಗೆ ಸಿಪಿಆರ್ ತರಬೇತಿ ನೀಡಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೃದಯಾಘಾತ ಹಾಗೂ ಅಪಘಾತದಂತಹ ಸಂದರ್ಭದಲ್ಲಿ ತುರ್ತು ವೈದ್ಯಕೀಯ ಸೇವೆ ಮುಖ್ಯವಾಗಿದ್ದು, ಸಕಾಲಕ್ಕೆ ಚಿಕಿತ್ಸೆ ನೀಡಿದ್ರೆ ವ್ಯಕ್ತಿಗಳು ಬದುಕುಳಿಯುವ ಸಾಧ್ಯತೆ ಹೆಚ್ಚು, ಹೀಗಾಗಿ ರಾಜ್ಯದ ಶಾಲಾ ಪಠ್ಯದಲ್ಲಿ ಸಿಪಿಆರ್ ಕಡ್ಡಾಯಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular