HomeIndiaBIG NEWS : ಅಶ್ಲೀಲ ಕಂಟೆಂಟ್‌ಗೆ ಬ್ರೇಕ್ : 50 OTT ವೇದಿಕೆಗಳನ್ನು ಬ್ಲಾಕ್ ಮಾಡಿದ...

BIG NEWS : ಅಶ್ಲೀಲ ಕಂಟೆಂಟ್‌ಗೆ ಬ್ರೇಕ್ : 50 OTT ವೇದಿಕೆಗಳನ್ನು ಬ್ಲಾಕ್ ಮಾಡಿದ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರ ಅಶ್ಲೀಲ ಹಾಗೂ ಕಾನೂನುಬಾಹಿರ ವಿಷಯಗಳನ್ನು ಪ್ರಸಾರ ಮಾಡುತ್ತಿದ್ದ 50 OTT ವೇದಿಕೆಗಳನ್ನು ಕಳೆದ ಎರಡು ವರ್ಷಗಳಲ್ಲಿ ನಿರ್ಬಂಧಿಸಿದೆ. 2021ರ ಮಾಹಿತಿ ತಂತ್ರಜ್ಞಾನ (IT) ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಈ ಕುರಿತು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ರಾಜ್ಯ ಸಚಿವ ಡಾ. ಎಲ್. ಮುರುಗನ್ ಅವರು ಲೋಕಸಭೆಯಲ್ಲಿ ಲಿಖಿತ ಉತ್ತರದ ಮೂಲಕ ಮಾಹಿತಿ ನೀಡಿದ್ದಾರೆ. ನಾಸಿಕ್ ಸಂಸದ ರಾಜಾಭೌ ಪರಾಗ್ ಪ್ರಕಾಶ್ ವಾಜೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, OTT ವೇದಿಕೆಗಳ ವಿರುದ್ಧ ಬಂದ ದೂರುಗಳ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಸಚಿವರ ಪ್ರಕಾರ, ಈ OTT ವೇದಿಕೆಗಳು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67 ಹಾಗೂ 67A ಸೇರಿದಂತೆ ಹಲವು ಕಾನೂನು ವಿಧಿಗಳನ್ನು ಉಲ್ಲಂಘಿಸಿವೆ. ಕಾನೂನುಬಾಹಿರ ವಿಷಯಗಳನ್ನು ತೆಗೆದುಹಾಕುವಂತೆ ಮಧ್ಯವರ್ತಿಗಳಿಗೆ (Intermediaries) ನಿರ್ದೇಶನ ನೀಡುವ ಅಧಿಕಾರ ಕೇಂದ್ರ ಸರ್ಕಾರಕ್ಕಿದ್ದು, ನಿಯಮ ಉಲ್ಲಂಘಿಸುವ OTT ವೇದಿಕೆಗಳ ವಿರುದ್ಧ ಮುಂದೆಯೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದರ ಜೊತೆಗೆ, OTT ವೇದಿಕೆಗಳಲ್ಲಿ ಪ್ರಸಾರವಾಗುವ ವಿಷಯಗಳ ಮೇಲೂ ಸೆನ್ಸಾರ್ ನಿಯಂತ್ರಣ ಜಾರಿಗೆ ತರುವ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ. ಇದುವರೆಗೆ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುವ ಸಿನಿಮಾಗಳಿಗೆ ಮಾತ್ರ ಅನ್ವಯವಾಗುತ್ತಿದ್ದ ಸೆನ್ಸಾರ್ ಮಂಡಳಿಯ ನಿಯಮಗಳನ್ನು, ಮುಂದಿನ ದಿನಗಳಲ್ಲಿ OTT ವಿಷಯಗಳಿಗೂ ಅನ್ವಯಿಸುವಂತೆ ಮಾಹಿತಿ ತಂತ್ರಜ್ಞಾನ ನಿಯಮಗಳಲ್ಲಿ ತಿದ್ದುಪಡಿ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಪ್ರಸ್ತುತ OTT ವೇದಿಕೆಗಳು ಸ್ವಯಂ ನಿಯಂತ್ರಣ ವ್ಯವಸ್ಥೆಯನ್ನು ಅನುಸರಿಸುತ್ತಿದ್ದರೂ, ಅಶ್ಲೀಲ ಮತ್ತು ಕಾನೂನುಬಾಹಿರ ವಿಷಯಗಳನ್ನು ಪ್ರಸಾರ ಮಾಡುವ ವೇದಿಕೆಗಳ ವಿರುದ್ಧ ಕೇಂದ್ರ ಸರ್ಕಾರ ಕಠಿಣ ನಿಲುವು ತಾಳಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular